ರೈತರು ವಿಷ ಕುಡಿದು ಸಾಯುವ ಪರಿಸ್ಥಿಗೆ ದೂಡಿದ ಕಾಂಗ್ರೆಸ್ ಸರ್ಕಾರ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿ, ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರು ಕಳೆದ 5-6 ದಿನಗಳಿಂದ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದರೂ ಸ್ಪಂದಿಸದ ರೈತ ವಿರೋಧಿ ಕರ್ನಾಟಕ ಕಾಂಗ್ರೆಸ್ ಸರ್ಕಾರ, ರೈತರು ವಿಷ ಕುಡಿದು ಸಾಯುವ ಅಸಹಾಯಕ ಪರಿಸ್ಥಿಗೆ ದೂಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ನವರೇ, ರೈತರು ತಮ್ಮ ಕಷ್ಟವನ್ನು ಯಾರ ಬಳಿ ಹೇಳಿಕೊಳ್ಳಬೇಕು? ತಮ್ಮ ಬಳಿಯೋ ಅಥವಾ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಬಳಿಯೋ? ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
ಅಸಲಿಗೆ ನಿಮ್ಮ ಸರ್ಕಾರ ಬದುಕಿದೆಯಾ ಅಥವಾ ಸತ್ತಿದೆಯಾ? ಬೆಳಗಾವಿಯಲ್ಲಿರುವ ನಿಮ್ಮ ಘಟಾನುಘಟಿ ನಾಯಕರುಗಳು, ಅಹಿಂದ ರಾಜಕಾರಣದ ವಾರಸುದಾರರು ಎಲ್ಲಿದ್ದಾರೆ ಸ್ವಾಮಿ? ಬಿಹಾರ ಚುನಾವಣೆಗೆ ಹಣ ಹೊಂದಿಸುವಲ್ಲಿ ಬ್ಯುಸಿ ಆಗಿದ್ದಾರಾ? ಅಥವಾ ಯಾವುದಾದರೂ ಬ್ಯಾಂಕಿನ ಚುನಾವಣೆಯಲ್ಲಿ ಬ್ಯುಸಿ ಆಗಿದ್ದಾರಾ? ಅಥವಾ ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ ಹೋಗಿದ್ದಾರಾ?
ನಿಮ್ಮ ನಾಲಾಯಕ್ ಕಾಂಗ್ರೆಸ್ ಸರ್ಕಾರಕ್ಕೆ ನಾಡಿನ ಅನ್ನದಾತರ ಶಾಪ ತಟ್ಟದೇ ಇರದು ಎಂದು ಅಶೋಕ್ ಎಚ್ಚರಿಸಿದ್ದಾರೆ.

