ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾ ಸಂಚಾಲಕರಾಗಿ ಹಿರಿಯೂರಿನ ಟಿ. ಬಸವರಾಜ ನಾಯಕ ಅವರನ್ನು ನೇಮಕ ಮಾಡಲಾಗಿದೆ.
ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ರಾಜ್ಯಾಧ್ಯಕ್ಷ ಜಿ.ಟಿ ಚಂದ್ರಶೇಖರಪ್ಪ ಇವರು ನೇಮಕ ಮಾಡಿ ಜಿಲ್ಲೆಯ ಚಿತ್ರದುರ್ಗ, ಹಿರಿಯೂರು, ಚಳ್ಳಕೆರೆ, ಹೊಳಲ್ಕೆರೆ, ಮೊಳಕಾಲ್ಮೂರು, ಹೊಸದುರ್ಗ ತಾಲೂಕುಗಳಲ್ಲಿ
ಸಂಚರಿಸಿ ಸದಸ್ಯತ್ವ ನೋಂದಣಿ ಮಾಡುವುದರ ಜೊತೆಯಲ್ಲಿ ಸಮುದಾಯದ ಸಂಘಟನೆಗೆ ಒತ್ತು ನೀಡಬೇಕು ಎಂದು ರಾಜ್ಯಾಧ್ಯಕ್ಷರು ಆದೇಶ ಪತ್ರದಲ್ಲಿ ತಿಳಿಸಿರುತ್ತಾರೆ ಎಂದು ಪ್ರಧಾನ ಕಾರ್ಯದರ್ಶಿ ಕೆಂಪರಾಮಯ್ಯ ತಿಳಿಸಿದ್ದಾರೆ.

