ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿ. ರವಿ ರವರು ವರ್ಗಾವಣೆಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ರವಿ ಅವರ ಸ್ಥಾನಕ್ಕೆ ನೂತನವಾಗಿ ಪೊಲೀಸ್ ಉಪಾಧೀಕ್ಷಕರಾದ ಪಾಂಡುರಂಗ ಎಸ್ ರವರು ಆಗಮಿಸಿ ಅಧಿಕಾರ ವಹಿಸಿಕೊಂಡರು.
ಇದೇ ಸಂದರ್ಭದಲ್ಲಿ ಡಿವೈಎಸ್ಪಿ ಪಿ ರವಿ ಅವರಿಗೆ ಆತ್ಮೀಯವಾಗಿ ಗೌರವಿಸಲಾಯಿತು.

