ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಕುರಿತು ರಾಜ್ಯದ ಸಂಸದರು, ರಾಜ್ಯಸಭೆ ಸದಸ್ಯರು ಹಾಗೂ ಸಕ್ಕರೆ ಕಾರ್ಖಾನೆ ಮುಖ್ಯಸ್ಥರ ಜತೆ ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಸಚಿವರಾದ ಎಚ್.ಕೆ ಪಾಟೀಲ್, ಎಂ.ಬಿ ಪಾಟೀಲ್, ಶಿವಾನಂದ ಪಾಟೀಲ್, ಸತೀಶ್ ಜಾರಕಿಹೊಳಿ, ಆರ್.ಬಿ ತಿಮ್ಮಾಪುರ, ಶರಣ್ ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್, ಸಂಸದರಾದ ಲೆಹರ್ ಸಿಂಗ್, ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಾಜನೀಶ್ ಮತ್ತಿತರರು ಭಾಗವಹಿಸಿದ್ದರು.

