ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚೈನಾದಲ್ಲಿ ನಡೆದ 15 ವರ್ಷದೊಳಗಿನ ಬಾಲಕಿಯರ ಏಷ್ಯಾ ಕಪ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯದ ಶೈನಾ ಮಣಿಮುತ್ತು ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ಭವಿಷ್ಯದಲ್ಲಿ ಮತ್ತಷ್ಟು ಸಾಧನೆ ಮಾಡಿ ನಾಡಿಗೆ ಹಾಗೂ ದೇಶಕ್ಕೆ ಕೀರ್ತಿ ತರಲೆಂದು ಸಿದ್ದರಾಮಯ್ಯ ಅವರು ಶುಭ ಹಾರೈಸಿದರು.

