ಚಿತ್ರ ಅತ್ಯುತ್ತಮವಾಗಿದ್ದು, ಭರ್ಜರಿ ಪ್ರದರ್ಶನ ಕಾಣಲಿದೆ-ಸೋಮಶೇಖರ್

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಜಯ್ ಕುಮಾರ್ ಮತ್ತು ರಾಮಣ್ಣ ಅವರು‌ನಿರ್ಮಿಸಿ ರಾಘು ಶಿವಮೊಗ್ಗ ಅವರ ನಿರ್ದೇಶನದ
ʼದಿ‌ಟಾಸ್ಕ್ ಚಿತ್ರʼ ನವೆಂಬರ್ 21ರಂದು ಭರ್ಜರಿಯಾಗಿ ಬಿಡುಗಡೆಯಾಗಲಿದ್ದು ಚಿತ್ರ ವೀಕ್ಷಿಸಿ ಪ್ರೋತ್ಸಾಹಿಸಿ ಎಂದು ಕಾಂಗ್ರೆಸ್ ಮುಖಂಡರು ಹಾಗೂ ರಾಜ್ಯಮಟ್ಟದ ಸಾವಯವ ಕೃಷಿ ಉತ್ಪನ್ನ ಸಮಿತಿಯ ಮಾಜಿ ಅಧ್ಯಕ್ಷ ಬಿ ಸೋಮಶೇಖರ್ ಅವರು ಹೇಳಿದರು.

ದಿ ಟಾಸ್ಕ್ ಚಿತ್ರದ ಪ್ರಚಾರಾರ್ಥವಾಗಿ ಚಿತ್ರದುರ್ಗದ ನಿವೃತ್ತ ಪೊಲೀಸ್ ನೌಕರರ ಭವನದಲ್ಲಿ ನಡೆದ  ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

- Advertisement - 

ಎಲ್ಲರೂ ಸೇರಿ ಒಂದು ಒಳ್ಳೆಯ ಸಿನಿಮಾವನ್ನು ಮಾಡಿದ್ದಾರೆ. ಕಳೆದ ವಾರ ಹಾಡನ್ನು ಬಿಡುಗಡೆ ಮಾಡಿದ್ದರು. ಅದು ತುಂಬಾ ಜನಪ್ರಿಯತೆ ಗಳಿಸಿದೆ. ನಾನೂ ಸಹ ನೋಡಿದ್ದೇನೆ. ಈ ಚಿತ್ರ  ಯಶಸ್ವಿಯಾಗಲಿದೆ ಎಂಬ ಭರವಸೆ ಇದೆ. ಚಿತ್ರದುರ್ಗದಲ್ಲಿ ಈ ಸಿನಿಮಾ ಅದ್ದೂರಿಯಾಗಿ   ಬಿಡುಗಡೆಯಾಗಲಿದೆ. ಚಿತ್ರ ಶತದಿನೋತ್ಸವ ಆಚರಿಸಲಿ ಎಂದು ಶುಭ ಕೋರಿದರು.

ನಟ ಜಯಸೂರ್ಯ ಅವರು ಮಾತನಾಡಿ, ಒಂದು ಒಳ್ಳೆಯ ಪ್ರಯತ್ನ ಮಾಡಿದ್ದೇವೆ. ನಿಮ್ಮೆಲ್ಲರ ಪ್ರೋತ್ಸಾಹ ಇರಲಿ. ವಿಜಯ್ ಕುಮಾರ್ ಮತ್ತು ರಾಮಣ್ಣ ಅವರು ಅವಕಾಶ ನೀಡಿದ್ದಾರೆ. ಯಂಗ್‌ಏಜಿನವರಿಗೆ ಈ ಚಿತ್ರ ಮೆಚ್ಚುಗೆಯಾಗಲಿದೆ. ನಿರ್ದೇಶಕರ ರಾಘು ಶಿವಮೊಗ್ಗ ಹಾಗೂ ನಿರ್ಮಾಪಕರಿಗೆ ಧನ್ಯವಾದಗಳು ಎಂದರು. ಮುಖಂಡರಾದ ನರೇಂದ್ರ ಬಾಬು ಬಿಬಿಆರ್ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

- Advertisement - 

ಅದ್ಧೂರಿ ತಾರಾಗಣ-
ಇದೇ ನವೆಂಬರ್ 21ರಂದು ಭರ್ಜರಿಯಾಗಿ ಬಿಡುಗಡೆಯಾಗಲಿರುವ ದಿ‌ಟಾಸ್ಕ್ ಚಿತ್ರವನ್ನು ವಿಜಯ್ ಕುಮಾರ್ ಮತ್ತು ರಾಮಣ್ಣ ಅವರು‌ನಿರ್ಮಿಸಿದ್ದು
, ನಿರ್ದೇಶಕ ರಾಘು ಶಿವಮೊಗ್ಗ ಅವರ ನಿರ್ದೇಶನ ಈ ಚಿತ್ರಕ್ಕಿದೆ. ಜಯಸೂರ್ಯ ಆರ್ ಆಜಾದ್, ಸಾಗರ್ ರಾಮ್, ಅಚ್ಯುತ್ ಕುಮಾರ್, ಶ್ರೀಲಕ್ಷ್ಮೀ, ಗೋಪಾಲಕೃಷ್ಣ ದೇಶಪಾಂಡೆ‌ಸೇರಿದಂತೆ ಅದ್ಧೂರಿ ತಾರಾಗಣ ಈ ಚಿತ್ರದಲ್ಲಿದೆ.

 

Share This Article
error: Content is protected !!
";