ಚಂದ್ರವಳ್ಳಿ ನ್ಯೂಸ್, ಹಾಸನ:
ಭಾರತದ ಉಪರಾಷ್ಟ್ರಪತಿ ರಾಧಾಕೃಷ್ಣನ್ ಕರ್ನಾಟಕ್ಕೆ ಮೊದಲ ಸಲ ಭೇಟಿ ನೀಡಿದ್ದು, ಹಾಸನದ ಶ್ರವಣಬೆಳಗೊಳದಲ್ಲಿ ನಡೆದ 4ನೇ ಬೆಟ್ಟದ ಪದನಾಮ ಅನಾವರಣ ಸಮಾರಂಭಕ್ಕೆ ಸಾಕ್ಷಿಯಾಗಿದ್ದಾರೆ.
ಶ್ರವಣಬೆಳಗೊಳದಲ್ಲಿ 20ನೇ ಶತಮಾನದ ಪ್ರಥಮಾಚಾರ್ಯ, ಚಾರಿತ್ರ್ಯ ಚಕ್ರವರ್ತಿ ಆಚಾರ್ಯ ಶ್ರೀ 108 ಶಾಂತಿಸಾಗರ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನಾ ಮಹೋತ್ಸವ ನೆರವೇರಿದ್ದು ಈ ಮಹತ್ವದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದಾರೆ.

ಅಲ್ಲದೆ ರಾಜ್ಯಪಾಲ ಗೆಹ್ಲೋಟ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸಚಿವರಾದ ಕೃಷ್ಣ ಭೈರೇಗೌಡ, ಡಿ. ಸುಧಾಕರ್, ಶಾಸಕ ಸಿ.ಎನ್. ಬಾಲಕೃಷ್ಣ ಮತ್ತು ದಿಗ್ಗುಣ ಜೈನ ಮಠಾಧೀಶರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

