ಚಂದ್ರವಳ್ಳಿ ನ್ಯೂಸ್, ನವದೆಹಲಿ:
ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿ ಓರ್ವ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸ್ಫೋಟದ ನಂತರ, ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸೋಮವಾರ ಸಂಜೆ 6.55ರ ಸುಮಾರಿಗೆ ಸ್ಫೋಟಕ ಸಂಭವಿಸಿದ್ದು ಏಳೆಂಟು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದೆಹಲಿ ಕೆಂಪುಕೋಟೆ ಬಳಿಯ ಚಾಂದನಿ ಚೌಕ್‌ನ ಲಾಲ್ ಕಿಲಾ ಬಳಿ ಕಾರು ಸ್ಫೋಟಗೊಂಡಿದೆ. ಸ್ಫೋಟಕಕ್ಕೆ ಕಾರಣ ಏನೆಂದು ಪತ್ತೆಯಾಗಿಲ್ಲ. ಸದ್ಯ 7 ಅಗ್ನಿಶಾಮಕ ವಾಹನ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.
ಘಟನೆಯ ಸಮಯದಲ್ಲಿ ದೊಡ್ಡ ಜನಸಮೂಹವೇ ನೆರೆದಿತ್ತು. ಕೆಂಪು ಕೋಟೆ ಪ್ರದೇಶವು ಸಂಜೆಯ ಸಮಯದಲ್ಲಿ ಜನದಟ್ಟಣೆಯಿಂದ ಕೂಡಿರುತ್ತದೆ. ಜನರು ದೃಶ್ಯವೀಕ್ಷಣೆಗೆ ಭೇಟಿ ನೀಡುತ್ತಾರೆ.
ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ನಂತರ ಮೂರರಿಂದ ನಾಲ್ಕು ವಾಹನಗಳು ಬೆಂಕಿಯಿಂದ ಹೊತ್ತಿ ಹುರಿಯುತ್ತಿವೆ. ಬೆಂಕಿ ನಂದಿಸಲು ದೆಹಲಿ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

