ರಾಷ್ಟ್ರ ಪ್ರಶಸ್ತಿ ವಿಜೇತ ‘ತಿಥಿ’ ಚಿತ್ರದ ಗಡ್ಡಪ್ಪ ಇನ್ನಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಷ್ಟ್ರ ಪ್ರಶಸ್ತಿ ವಿಜೇತ ತಿಥಿಚಲನ ಚಿತ್ರದಲ್ಲಿ ಗಡ್ಡಪ್ಪನ ಪಾತ್ರದಲ್ಲಿ ಅಮೋಘವಾಗಿ ನಟಿಸಿದ್ದ ಮಂಡ್ಯ ಜಿಲ್ಲೆಯ ನೊದೆಕೊಪ್ಪಲು ಗ್ರಾಮದ ಚನ್ನೇಗೌಡ ಅವರು ನಿಧನರಾಗಿದ್ದಾರೆ.
ಜತೆಗೆ
ತರ್ಲೆ ವಿಲೇಜ್‘, ‘ಜಾನಿ ಮೇರಾ ನಾಮ್‘, ‘ಹಳ್ಳಿ ಪಂಚಾಯಿತಿಸೇರಿ ಸುಮಾರು ಎಂಟು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು.

ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು ಇತರ ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವು ಎನ್ನಲಾಗಿದೆ.

- Advertisement - 

ಗಮನ ಸೆಳೆದಿದ್ದ ಗಡ್ಡಪ್ಪನ ಪಾತ್ರ:
2015ರಲ್ಲಿ ಅಂದರೆ 10 ವರ್ಷಗಳ ಹಿಂದೆ ತೆರೆಗೆ ಬಂದಿದ್ದ ಸೂಪರ್ ಹಿಟ್ ಸಿನಿಮಾ
ತಿಥಿ’. ತೆರೆಗೆ ಬಂದ ಈ ಚಿತ್ರ ಮೆಚ್ಚುಗೆ ಪಡೆಯಿತು. ಹಲವು ಪ್ರಶಸ್ತಿಗಳನ್ನು ಕೂಡ ಬಾಚಿಕೊಂಡಿತು.

ಈ ಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಮಾಡಿದ್ದ ಚನ್ನೇಗೌಡ ಅವರು ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ತಿಥಿಸಿನಿಮಾದಲ್ಲಿ ಅವರು ಮಾಡಿದ್ದ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು.
ಗಡ್ಡಪ್ಪ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ನವೆಂಬರ್-12 ರಂದು ಬುಧವಾರ ಚಿಕಿತ್ಸೆ ಫಲಿಸದೆ ಇಹಲೋಕದ ಪ್ರಯಾಣ ಮುಗಿಸಿದ್ದಾರೆ. ಅವರು
ತಿಥಿಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಮಾಡಿ ಫೇಮಸ್ ಆದರು. ಎಲ್ಲರೂ ಅವರನ್ನು ಗಡ್ಡಪ್ಪ ಎಂದೇ ಗುರುತಿಸುತ್ತಿದ್ದರು.

- Advertisement - 

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿ ಶ್ರದ್ಧಾಂಜಲಿ ಅರ್ಪಿಸಿ ಪ್ರಾರ್ಥಿಸಿದ್ದಾರೆ.

Share This Article
error: Content is protected !!
";