ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಾಗಲಕೋಟೆಯಲ್ಲಿ ಕಬ್ಬಿನ ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿರುವುದು ನಾವಲ್ಲ ಎಂದು ರೈತರು ಹೇಳಿಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಸರ್ಕಾರ 3,300 ರೂ.ಗಳ ದರ ನಿಗದಿ ಮಾಡಿದ್ದು, ಮುಧೋಳದ ರೈತರು ಅದಕ್ಕೆ ಒಪ್ಪಿಗೆ ಸೂಚಿಸಿ, ಚಳವಳಿಯನ್ನು ವಾಪಸ್ಸು ಪಡೆಯಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದರು.
ಬಿಹಾರ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಪ್ರಜಾಪ್ರಭುತ್ವದಲ್ಲಿ ಜನರ ತೀರ್ಪನ್ನು ಒಪ್ಪಿಕೊಳ್ಳಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

