ವಾರ್ಷಿಕ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿದ ಸಚಿವ ರಾಮಲಿಂಗಾರೆಡ್ಡಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಎಸ್‌ಆರ್‌ಟಿಸಿ ನಿಗಮದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಅವರ ಮಕ್ಕಳಿಗಾಗಿ ಶಾಂತಿನಗರ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಿರುವ ವಾರ್ಷಿಕ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.

ಚೆಸ್, ಕೇರಂ, ಶೆಟಲ್, ಟೇಬಲ್ ಟೆನ್ನಿಸ್ , ಸಂಗೀತ ಸ್ಪರ್ಧೆಗಳು, ಸಂಗೀತ ಕುರ್ಚಿ, ಗುಂಡು ಎಸೆತ, ವೇಗ ನಡಿಗೆ, ಮಡಿಕೆ‌ಹೊಡೆಯುವ ಆಟ‌‌ಇತ್ಯಾದಿಗಳನ್ನು ಕಾರ್ಯಕ್ರಮದಲ್ಲಿ ಏರ್ಪಡಿಸಲಾಗಿತ್ತು.

- Advertisement - 

ಸಿಬ್ಬಂದಿಗಳ ಮನೋಬಲ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಇಂತಹ ಕಾರ್ಯಕ್ರಮಗಳು ಪೂರಕ. ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಿದ್ದ ನಿಗಮಕ್ಕೆ ಅಭಿನಂದನೆಗಳನ್ನು ಸಚಿವರು ತಿಳಿಸಿದ್ದಾರೆ.

- Advertisement - 

ಈ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ನಿರ್ದೇಶಕಿ ಡಾ. ನಂದಿನಿ ದೇವಿ ಕೆ.(ಸಿಬ್ಬಂದಿ & ಜಾಗೃತ), ನಿರ್ದೇಶಕ ಇಬ್ರಾಹಿಂ ಮೈಗೂರ (ಮಾಹಿತಿ ತಂತ್ರಜ್ಞಾನ)  ಹಾಗೂ ನಿಗಮದ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

 

 

 

 

Share This Article
error: Content is protected !!
";