ಹಿರಿಯ ನಾಗರೀಕರಿಗೆ ಉಚಿತ ಆರೋಗ್ಯ ತಪಾಸಣೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರಿನ ಹಿರಿಯ ನಾಗರೀಕರ ಸೇವಾ ಕೇಂದ್ರದಲ್ಲಿ ಈಚೆಗೆ ಜಿಲ್ಲಾ ಆಯುಷ್ ಇಲಾಖೆ ಹಾಗೂ ಹಿರಿಯ ನಾಗರೀಕರ ಹಾಗೂ ಅಂಗವಿಕಲರ ಕಲ್ಯಾಣ ಇಲಾಖೆ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ ಮಾತನಾಡಿ, ಹಿರಿಯ ನಾಗರೀಕರಲ್ಲಿ ಆರೋಗ್ಯ ಸಮಸ್ಯೆಗಳು ಸಹಜವಾಗಿ ಬರುತ್ತವೆ. ಆದ ಕಾರಣ ಉತ್ತಮ ಆಹಾರ ಹಾಗೂ ಜೀವನ ಶೈಲಿ ಬಗ್ಗೆ ಹೆಚ್ಚು ಗಮನ ಹರಿಸಿ ಆಯುರ್ವೇದ ಜೀವನ ಪದ್ಧತಿಯು ಹಿರಿಯ ನಾಗರಿಕರಲ್ಲಿ ಕಂಡು ಬರುವ ಮುಪ್ಪಿನ ಸಮಸ್ಯೆಗಳನ್ನು ಯಶಸ್ವಿಯಾಗಿ ನಿಯಂತ್ರಿಸಬಲ್ಲದು.  ಹೆಚ್ಚಿನ ಮಾಹಿತಿಗಾಗಿ ಹಿರಿಯೂರಿನಲ್ಲಿರುವ ಆಸ್ಪತ್ರೆಗೆ ಭೇಟಿ ನೀಡಿ ಆಯುರ್ವೇದದ ಪ್ರಯೋಜನ ಪಡೆಯಬೇಕೆಂದು ಕರೆ ನೀಡಿದರು.

- Advertisement - 

ಆಯುಷ್ ವೈದ್ಯಾಧಿಕಾರಿ ಡಾ.ಶಿವಕುಮಾರ್ ಮಾತನಾಡಿ, ಶಾರೀರಿಕ ಆರೋಗ್ಯದಷ್ಟೇ ಪ್ರಾಮುಖ್ಯತೆಯನ್ನು ಮಾನಸಿಕ ಆರೋಗ್ಯವು ಹೊಂದಿದ್ದು, ಮಾನಸಿಕವಾಗಿ ಸಂತೋಷವಾಗಿ ಇರಲು ಪ್ರಯತ್ನಿಸಿ ಎಂದು ತಿಳಿಸಿದರು.

  ಕಾರ್ಯಕ್ರಮದಲ್ಲಿ ಡಾ. ಚಂಪಾ ಹಾಗೂ ಡಾ. ರಾಘವೇಂದ್ರ ಅವರು ರೋಗಿಗಳಿಗೆ ಆರೋಗ್ಯ ತಪಾಸಣೆ ಮಾಡಿ ಅವಶ್ಯಕತೆ ಇರುವ ಔಷಧಿಗಳನ್ನು ನೀಡಿದರು.

- Advertisement - 

 

 

Share This Article
error: Content is protected !!
";