ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳಿಗೆ ಜಿಲ್ಲಾಮಟ್ಟದ ಪ್ರಶಸ್ತಿಗೆ ಅರ್ಜಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳಿಗೆ ಜಿಲ್ಲಾಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

 ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕøತಿಕ ಹಾಗೂ ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಪ್ರತಿ ಕ್ಷೇತ್ರದಲ್ಲಿ ಇಬ್ಬರಂತೆ ಒಟ್ಟು 8 ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

- Advertisement - 

ಪ್ರಶಸ್ತಿಗೆ ಆಯ್ಕೆ ಮಾಡಲು ಮಾನದಂಡಗಳು: 5 ರಿಂದ 18 (ಜುಲೈ 31ರಂತೆ) ವರ್ಷದೊಳಗಿರಬೇಕು.  ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ ಮತ್ತು ಕಲೆ, ಸಾಂಸ್ಕøತಿಕ, ಸಂಗೀತ ಈ ಕ್ಷೇತ್ರಗಳಲ್ಲಿ ಅಸಾಧಾರಣ ಪ್ರತಿಭೆ ಹೊಂದಿರಬೇಕು. ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿದ ವಯಸ್ಸಿನ ಬಗ್ಗೆ ಜನನ ಪ್ರಮಾಣ ಪತ್ರದ ಪ್ರತಿ ಲಗತ್ತಿಸಬೇಕು. ಪ್ರತಿಭೆಯನ್ನು ಹೊಂದಿರುವ ಬಗ್ಗೆ ಪ್ರಮುಖ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ಪತ್ರಿಕೆ ತುಣುಕು ಅಥವಾ ಪ್ರಮಾಣ ಪತ್ರಗಳನ್ನು ಲಗತ್ತಿಸಬೇಕು.

ಅಂತರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುವ ಮಾಹಿತಿ, ಸಾಧಿಸಿರುವ ಪ್ರತಿಭೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಸಲ್ಲಿಸಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ನೆಲಸಿರಬೇಕು ಹಾಗೂ ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮಕ್ಕಳು ಪುನಃ ಪ್ರಶಸ್ತಿ ಪಡೆಯಲು ಅರ್ಹತೆ ಇರುವುದಿಲ್ಲ.

- Advertisement - 

ಆಸಕ್ತ ಆಭ್ಯರ್ಥಿಗಳು ಮೇಲಿನ ಷರತ್ತುಗಳೊಂದಿಗೆ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯೊಂದಿಗೆ, ಅರ್ಜಿದಾರರ ಭಾವಚಿತ್ರವಿರುವ ಪೋಟೋದೊಂದಿಗೆ ಇದೇ ನ. 26 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಭವನ ಆವರಣ, ಚಿತ್ರದುರ್ಗ ಇಲ್ಲಿ ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

 

Share This Article
error: Content is protected !!
";