ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ವೃಕ್ಷಮಾತೆ, ಶತಾಯುಷಿ ಸಾಲು ಮರದ ಡಾ.ತಿಮ್ಮಕ್ಕನವರ ನಿಧನಕ್ಕೆ ಜೆಡಿಎಸ್.ಜಿಲ್ಲಾಧ್ಯಕ್ಷ ಎಂ.ಜಯಣ್ಣ, ಮಾಜಿ ಅಧ್ಯಕ್ಷ ಡಿ.ಯಶೋಧರ, ರಾಜ್ಯ ಉಪಾಧ್ಯಕ್ಷ ಬಿ.ಕಾಂತರಾಜ್, ಜಿಲ್ಲಾ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ ಇವರುಗಳು ತೀವ್ರ ಸಂತಾಪ ಸೂಚಿಸಿದ್ದಾರೆ.
ಮರಗಳನ್ನೇ ಮಕ್ಕಳಂತೆ ಸಾಕಿ ಸಲಹುತ್ತಿದ್ದ ಸಾಲು ಮರದ ತಿಮ್ಮಕ್ಕ ಪರಿಸರಕ್ಕೆ ಬಹುದೊಡ್ಡ ಕೊಡುಗೆ ನೀಡಿ ಲಕ್ಷಾಂತರ ಜನರಿಗೆ ಪ್ರೇರಣೆಯಾಗುವ ಮೂಲಕ ಕರ್ನಾಟಕ ರಾಜ್ಯದ ಪರಿಸರ ರಾಯಭಾರಿಯಾಗಿದ್ದರು. ಪರಿಸರ ಪ್ರೇಮಿಯಾಗಿದ್ದ ಇವರ ಆತ್ಮಕ್ಕೆ ಎಂ.ಜಯಣ್ಣ ಮತ್ತಿತರರು ಶಾಂತಿ ಕೋರಿದ್ದಾರೆ.

