ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲಲಿತಕಲಾ ಅಕಾಡೆಮಿಯು ರಾಜ್ಯದ ವಿವಿಧ ಕಲಾಶಾಲೆಗಳಲ್ಲಿ ಕಲಿಯುತ್ತಿರುವ ಕಲಾ ವಿದ್ಯಾರ್ಥಿಗಳಿಗೆ ನವೆಂವಬರ್ 1 ರಿಂದ 5ರ ವರೆಗೆ ಜೈನ್ ಡೀಮ್ಡ್-ಟು-ಬಿ ಯುನಿವರ್ಸಿಟಿ ಸಹಕಾರದೊಂದಿಗೆ ಕಲಾಸ್ಪರ್ಧೆಯನ್ನು ಏರ್ಪಡಿಸಿದ್ದು
ಈ ಸ್ಪರ್ಧೆಯಲ್ಲಿ ರಚಿತವಾದ 30 ಕಲಾಕೃತಿಗಳ ಪ್ರದರ್ಶನ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ತರಬೇತಿ ಕಾರ್ಯಾಗಾರವನ್ನು ನವೆಂಬರ್ ರಂದು ಬೆಳಗ್ಗೆ 11.00 ಗಂಟೆಗೆ, ಬೆಂಗಳೂರಿನ ಜೆ.ಸಿ.ರಸ್ತೆಯಲ್ಲಿರುವ ಕನ್ನಡ ಭವನದ ವರ್ಣ ಆರ್ಟ್ ಗ್ಯಾಲರಿಯಲ್ಲಿ ಆಯೋಜಿಸಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯಿತ್ರಿ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಶ್ರೀಜಾ ವಿ.ಎನ್ ಪತ್ರಕರ್ತರು ಮತ್ತು ಬಹುರೂಪಿ ಸಂಸ್ಥಾಪಕರು, ಬೆಂಗಳೂರು ಇವರು ಆಗಮಿಸಲಿದ್ದಾರೆ. ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ಕರ್ನಾಟಕ ಲಲಿತಕಲಾ ಅಕಾಡೆಮಿಯ ಅಧ್ಯಕ್ಷ ಪ.ಸ.ಕುಮಾರ್ ಇವರು ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

