ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರಿನ ನಗರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಪೇದೆ ಕುಮಾರಿ ಅನುಷಾ ಇವರು ತಮಗೆ ವಹಿಸಿರುವ ಬೀಟ್ ನಲ್ಲಿ ಉತ್ತಮ ಕಾರ್ಯ ನಿರ್ವಹಿಸಿರುವುದಕ್ಕೆ ಚಿತ್ರದುರ್ಗ ಜಿಲ್ಲೆಯ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಇವರಿಂದ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ಪಡೆದಿದ್ದಾರೆ.
ಅಭಿನಂದನಾ ಪತ್ರ ಮತ್ತು ನಗದು ಬಹುಮಾನ ಪಡೆದಿರುವ ಮಹಿಳಾ ಪೊಲೀಸ್ ಪೇದೆ ಕುಮಾರಿ ಅನುಷಾ ಇವರನ್ನು ಹಿರಿಯೂರು ನಗರಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

