ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾಧಕರ ಸಾಧನೆಗಳು ಸಮಾಜಕ್ಕೆ ಮಾದರಿಯಾಗಿವೆ. ಸಾಧಕರಿಗೆ ರಮಶ್ರೀ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಸಾಧಕರ ಮತ್ತೊಷ್ಟು ಜವಾಬ್ದಾರಿ ಹೆಚ್ಚಾಗಿದೆ ಎಂದರ್ಥ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಹೇಳಿದರು.
ರಮಣಶ್ರೀ ಪ್ರತಿಷ್ಠಾನ ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಮೈಸೂರು ಇವರ ಸಹಯೋಗದಲ್ಲಿ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ 20ನೇ ವರ್ಷದ ʼರಮಣಶ್ರೀ ಶರಣ ಪ್ರಶಸ್ತಿ ಪ್ರದಾನ – 2025’ ಸಮಾರಂಭ ಉದ್ಘಾಟಿಸಿ, ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದಿಸಿ ಅವರು ಮಾತನಾಡಿದರು.
ಪ್ರಶಸ್ತಿಗಳು ಸಾಮಾಜಿಕ ಹೊಣೆಗಾರಿಕೆ ಹೆಚ್ಚಿಸಲಿವೆ ಮತ್ತು ಇನ್ನೂ ಹೆಚ್ಚಿನ ಸಾಧನೆ ಮಾಡಲು ಉತ್ತೇಜಿಸಲಿದೆ ಎಂದು ಸಚಿವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಉದ್ಯಮಿ ಹಾಗೂ ಸಾಹಿತಿ, ಅಂಕಣಕಾರ ಎಸ್. ಷಡಕ್ಷರಿ ಅವರ ʼಕ್ಷಣ ಹೊತ್ತು ಅಣಿ ಮುತ್ತು ಭಾಗ – 15ʼ ಪುಸ್ತಕ ಲೋಕಾರ್ಪಣೆಗೊಳಿಸಲಾಯಿತು.

ಹಿರಿಯ ಸಾಹಿತಿ ನಾಡೋಜ ಡಾ.ಗೊ.ರು ಚನ್ನಬಸಪ್ಪ, ಕೇಂದ್ರ ಸಚಿವ ವಿ. ಸೋಮಣ್ಣ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ್ ಭಟ್, ರಮಣಶ್ರೀ ಪ್ರತಿಷ್ಠಾನದ ಅಧ್ಯಕ್ಷ ಎಸ್. ಷಡಕ್ಷರಿ, ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಸಿ. ಸೋಮಶೇಖರ ಮೊದಲಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

