ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ), ದಾವಣಗೆರೆ ವಿಶ್ವವಿದ್ಯಾನಿಲಯ, ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ ಇವರ ಸಂಯುಕ್ತಾಶ್ರಯದಲ್ಲಿ “ದಾವಣಗೆರೆ ವಿಶ್ವವಿದ್ಯಾನಿಲಯ ಅಂತರ ಕಾಲೇಜು ನೆಟ್ ಬಾಲ್ ಪಂದ್ಯಾವಳಿ ಮತ್ತು ಆಯ್ಕೆ ಇದೇ ನ.18ರಂದು ಬೆಳಿಗ್ಗೆ 10.30ಕ್ಕೆ ನಗರದ ಸರ್ಕಾರಿ ಕಲಾ ಕಾಲೇಜು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಉದ್ಘಾಟನೆ ನೆರವೇರಿಸುವರು. ವಿಶೇಷ ಆಹ್ವಾನಿತರಾಗಿ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ದಾವಣಗೆರೆ ವಿವಿ ಸಿಂಡಿಕೇಟ್ ಸದಸ್ಯ ಪ್ರೊ.ಎಚ್.ತಿಪ್ಪೇಸ್ವಾಮಿ ಭಾಗವಹಿಸುವರು.
ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಪ್ರಾಂಶುಪಾಲ ಡಾ.ಜೆ.ಕರಿಯಪ್ಪ ಮಾಳಿಗೆ ಅಧ್ಯಕ್ಷತೆ ವಹಿಸವರು. ಮುಖ್ಯ ಅತಿಥಿಗಳಾಗಿ ದಾವಣಗೆರೆ ವಿವಿ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ ಡೀನರು ಡಾ.ವೆಂಕಟೇಶ್, ದೈಹಿಕ ಶಿಕ್ಷಣ ನಿರ್ದೇಶಕರ ಸಂಘ ಪ್ರಧಾನ ಕಾರ್ಯದರ್ಶಿ ಡಾ.ಕೆ.ಎಂ.ವೀರೇಂದ್ರ,
ಸರ್ಕಾರಿ ಕಲಾ ಕಾಲೇಜು ಕಾಲೇಜು ಅಧ್ಯಾಪಕರ ಸಂಘದ ಜಂಟಿ ಕಾರ್ಯದರ್ಶಿ ಡಾ.ಪಿ.ಎಸ್.ಮೇಘನಾ, ಐಕ್ಯೂಎಸಿ ಸಂಚಾಲಕ ಡಾ.ಆರ್.ತಾರಿಣಿ ಶುಭದಾಯಿನಿ ಪತ್ರಾಂಕಿತ ವ್ಯವಸ್ಥಾಪಕ ಮಾರ್ಟಿನ್ ಸ್ಯಾಮುಯೆಲ್, ಅಹೋಬಲ ಟಿವಿಎಸ್ ಶೋರೋಮ್ ಮಾಲೀಕ ಅರುಣ್ ಭಾಗವಹಿಸುವರು ಎಂದು ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲ ಡಾ.ಜೆ.ಕರಿಯಪ್ಪ ಮಾಳಿಗೆ ತಿಳಿಸಿದ್ದಾರೆ.

