ಕ್ವಾಂಟಮ್ ತಂತ್ರಜ್ಞಾನಕ್ಕೆ ಒತ್ತು ನೀಡಿದ ಮೊದಲ ರಾಜ್ಯ ಕರ್ನಾಟಕ:

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕ್ವಾಂಟಮ್ ತಂತ್ರಜ್ಞಾನದ ಮಾರ್ಗಸೂಚಿಗಳನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ ಪಾರ್ಕ್ ಆಫ್ ಇಂಡಿಯಾ, ಬೆಂಗಳೂರು ಇವರ ವತಿಯಿಂದ ಆಯೋಜಿಸಲಾದ ಬೆಂಗಳೂರು ಟೆಕ್ ಸಮ್ಮಿಟ್28 ನೇ ಆವೃತ್ತಿ ಉದ್ಘಾಟಿಸಿ ಅವರು ಮಾತನಾಡಿದರು.

- Advertisement - 

ಡೀಪ್ ಸೈನ್ಸ್ ಮತ್ತು ಸುಧಾರಿತ ಇಂಜಿನಿಯರಿಂಗ್ ವ್ಯವಸ್ಥೆ ಒದಗಿಸಲು ರಾಜ್ಯ ಬದ್ಧವಾಗಿದ್ದು, ಎಐ, ಸೈಬರ್-ಭದ್ರತೆ, ದತ್ತಾಂಶ ವಿಜ್ಞಾನ, ಅನಿಮೇಷನ್ ಮತ್ತು ರೊಬೊಟಿಕ್ಸ್ನಲ್ಲಿ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದರು.
ಬಿಯಾಂಡ್ ಬೆಂಗಳೂರುಉಪಕ್ರಮದ ಮೂಲಕ ತಂತ್ರಜ್ಞಾನ ಆರ್ಥಿಕತೆಯ ವಿಕೇಂದ್ರೀಕರಣಕ್ಕೆ ಮುಂದಾಗಿರುವ ನಮ್ಮ ಸರ್ಕಾರ, ಮುಂದಿನ ಪೀಳಿಗೆಗಾಗಿ ಟೈರ್ 2 ನಗರಗಳನ್ನು ನಾವಿನ್ಯತೆಯ ಕ್ಲಸ್ಟರ್ ಗಳಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಸಿಎಂ ತಿಳಿಸಿದರು.

ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ- ಹೂಡಿಕೆದಾರರಿಗೆ ಮುಖ್ಯಮಂತ್ರಿ ಕರೆ:
ಈ ಎಲ್ಲ ಕ್ರಮಗಳು ಕೇವಲ ಆರ್ಥಿಕತೆಯನ್ನು ಕೇಂದ್ರೀಕರಿಸದೇ
, ಸಮಾನ ಬೆಳವಣಿಗೆಗೂ ಬದ್ಧವಾಗಿವೆ. ರಾಜ್ಯದ ಪ್ರತಿ ಜಿಲ್ಲೆಯೂ ಹಾಗೂ ಯುವಪೀಳಿಗೆಯು ಡಿಜಿಟಲ್ ಯುಗಕ್ಕೆ ತೆರೆದುಕೊಳ್ಳುವ ಅವಕಾಶವನ್ನು ನೀಡಲಾಗಿದೆ. ನಮ್ಮ ಆಡಳಿತದ ಮಾದರಿಯು ಪಾರದರ್ಶಕತೆ, ನಿರೀಕ್ಷಿತ ನಡೆ ಹಾಗೂ ಸ್ಥಿರತೆಗೆ ಬದ್ಧವಾಗಿದೆ. ನಮ್ಮ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳುಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿ ಮುಂದುವರೆದಿದೆ.

- Advertisement - 

ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರವಾಗಲಿ, ಸ್ಟಾರ್ಟ್ ಅಪ್ ಆಗಲಿ, ಶೈಕ್ಷಣಿಕ ಸಂಶೋಧನೆಯಾಗಲಿ, ಯಾವುದೇ ಕ್ಷೇತ್ರದ ಬಂಡವಾಳ ಹೂಡಿಕೆ ಕರ್ನಾಟಕ ರಾಜ್ಯ ತಾಣವಾಗಿವೆ. ಏಐ , ಕ್ವಾಂಟಮ್ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಬಾಹ್ಯಾಕಾಶ ತಂತ್ರಜ್ಞಾನದಲ್ಲಿನ ವಿಫುಲ ಅವಕಾಶಗಳನ್ನು ಬಳಸಿಕೊಂಡು ಮಾನವ ಪ್ರಗತಿಗೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕೆಂದು ಮುಖ್ಯಮಂತ್ರಿಗಳು ಕರೆ ನೀಡಿದರು.

 

Share This Article
error: Content is protected !!
";