ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನಲ್ಲಿ 1.40 ಲಕ್ಷ ಜನರಿದ್ದು, ಆ ಪೈಕಿ ಶೇ.20ರಷ್ಟು ಜನರು ಐಟಿ ವೃತ್ತಿಪರರಾಗಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಹಿತಿ ನೀಡಿದರು.
ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ ಪಾರ್ಕ್ ಆಫ್ ಇಂಡಿಯಾ, ಬೆಂಗಳೂರು ಇವರ ವತಿಯಿಂದ ಆಯೋಜಿಸಲಾದ ‘ಬೆಂಗಳೂರು ಟೆಕ್ ಸಮ್ಮಿಟ್’28 ನೇ ಆವೃತ್ತಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಭಾಗವಹಿಸಿ ಮಾತನಾಡಿದರು. “ಬೆಂಗಳೂರು ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬೆಳೆದಿದೆ. ಕ್ಯಾಲಿಫೋರ್ನಿಯಾದಲ್ಲಿ 13 ಲಕ್ಷ ಐಟಿ ವೃತ್ತಿಪರರು ಇದ್ದರೆ, ಬೆಂಗಳೂರಿನಲ್ಲಿ 25 ಲಕ್ಷ ಐಟಿ ವೃತ್ತಿಪರರಿದ್ದಾರೆ. ಇದು ಬೆಂಗಳೂರಿನ ಐಟಿ ಕ್ಷೇತ್ರದ ಸಾಮರ್ಥ್ಯ ಎಂದು ಹರ್ಷ ವ್ಯಕ್ತಪಡಿಸಿದರು.
“ಈ ಸಮ್ಮೇಳನದಲ್ಲಿ ವಿಶ್ವದ ನಾನಾ ಭಾಗಗಳಿಂದ 550 ಮಂದಿ ತಮ್ಮ ಅಭಿಪ್ರಾಯವನ್ನು ಈ ಸಮ್ಮೇಳನದಲ್ಲಿ ಹಂಚಿಕೊಳ್ಳಲಿದ್ದಾರೆ. ಕರ್ನಾಟಕ ಐಟಿ ಕ್ಷೇತ್ರದ ದಿಗ್ಗಜನಾಗಿ ಬೆಳೆದಿಲ್ಲ, ಖಾಸಗಿ ವಲಯಕ್ಕೆ ಸರ್ಕಾರದ ನೆರವು ಇಂದು ಈ ಸ್ಥಿತಿಗೆ ತಲುಪಲು ಕಾರಣವಾಗಿದೆ. ದೇಶದಲ್ಲಿ ಮೊದಲು ಐಟಿ ನೀತಿ ಜಾರರಿಗೊಳಿಸಿದ ರಾಜ್ಯ ಕರ್ನಾಟಕ.
ಐಟಿ ಇಲಾಖೆ ಆರಂಭಿಸಿದ ಮೊದಲ ರಾಜ್ಯ ಕರ್ನಾಟಕ. ಬೆಂಗಳೂರನ್ನು ಗಾರ್ಡನ್ ಸಿಟಿ, ಸಿಲಿಕಾನ್ ವ್ಯಾಲಿ ಆಪ್ ಇಂಡಿಯಾ, ಏಷ್ಯದ ನವೋದ್ಯಮಗಳ ರಾಜಧಾನಿ ಎಂಬ ಖ್ಯಾತಿ ಪಡೆದಿದೆ” ಎಂದು ಡಿಸಿಎಂ ಶಿವಕುಮಾರ್ ಶ್ಲಾಘಿಸಿದರು.

