ಎತ್ತಿನ ಹೊಳೆ ಯೋಜನೆಗೆ ತಡೆಯಾಜ್ಞೆ

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಎತ್ತಿನಹೊಳೆ ಯೋಜನೆಗೆ ಅರಣ್ಯ ಭೂಮಿ ಬಳಕೆಯ ಆರೋಪದ ಹಿನ್ನೆಲೆಯಲ್ಲಿ
ಕೇಂದ್ರ ಅರಣ್ಯ ಸಮಿತಿ ತಡೆಯಾಜ್ಞೆ ನೀಡಿದೆ.

ಈ ಹಿನ್ನೆಲೆಯಲ್ಲಿ, ಕೇಂದ್ರ ಪರಿಸರ ಇಲಾಖೆಯ ಸಲಹಾ ಸಮಿತಿ ಜಂಟಿ ವರದಿ ಕೇಳಿದೆ. 2027ಕ್ಕೆ ಮುಗಿಯಬೇಕಿದ್ದ ಕಾಮಗಾರಿಗಳು ಸ್ಥಗಿತಗೊಂಡಿದ್ದು, ಪರಿಸರದ ಮೇಲೆ ಭಾರಿ ಹಾನಿಯಾಗಿದೆ ಎಂದು ವರದಿಯಾಗಿದೆ.

- Advertisement - 

ಎತ್ತಿನಹೊಳೆ ಯೋಜನೆ ವ್ಯಾಪ್ತಿಯ ಜಿಲ್ಲೆಗಳಾದ ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರಕ್ಕೆ 2027 ಮಾರ್ಚ್ ವೇಳೆಗೆ ಎತ್ತಿನಹೊಳೆ ಕಾಮಗಾರಿ ಪೂರ್ಣಗೊಳಿಸಿ ಕುಡಿಯುವ ನೀರು ಪೂರೈಕೆಗೆ ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿತ್ತು.

ಉಪಮುಖ್ಯಮಂತ್ರಿ ಡಿಸಿಎಂ ಡಿ.ಕೆ ಶಿವಕುಮಾರ್‌ ಮಾತನಾಡಿ ಕೇಂದ್ರದ ಆಕ್ಷೇಪಕ್ಕೆ ರಾಜ್ಯ ಸರ್ಕಾರ ಈಗಾಗಲೇ ಉತ್ತರಿಸಿದೆ. ಕೇಂದ್ರಕ್ಕೆ ಯೋಜನೆ ಪೂರ್ಣಗೊಳಿಸಲು ಮನವಿ ಮಾಡಿದೆ ಎಂದು ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";