ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಮಾಣವಚನ ಬೋಧಿಸಿದರು.
ವಿಧಾನಸೌಧದಲ್ಲಿಂದು ರಾಷ್ಟ್ರೀಯ ಐಕ್ಯತಾ ಸಪ್ತಾಹದ ಪ್ರಮಾಣವಚನ ಬೋಧನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರೊಂದಿಗೆ ಡಿಸಿಎಂ ಶಿವಕುಮಾರ್ ಭಾಗವಹಿಸಿದ್ದರು.
ರಾಷ್ಟ್ರದ ಸ್ವಾತಂತ್ರ್ಯ ಮತ್ತು ಐಕ್ಯತೆಯನ್ನು ಬಲಪಡಿಸುವುದು, ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟುವ ಸಲುವಾಗಿ ಪ್ರತಿ ವರ್ಷ ನವೆಂಬರ್ 19 ರಿಂದ 25 ರವರೆಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಡಿಸಿಎಂ ಶಿವಕುಮಾರ್ ತಿಳಿಸಿದರು.
ಇದೇ ವೇಳೆ ಭಾರತದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಇಂದಿರಾಗಾಂಧಿ ಅವರ ಜಯಂತಿ ಹಿನ್ನೆಲೆ ಅವರ ಭಾವಚಿತ್ರಕ್ಕೆ ಡಿಸಿಎಂ ಶಿವಕುಮಾರ್ ಪುಷ್ಪನಮನದೊಂದಿಗೆ ಗೌರವ ಸಲ್ಲಿಸಿದರು.

