ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೆಕ್ಕೆಜೋಳ ಬೆಳೆಗಾರರ ಆಕ್ರೋಶ ಭುಗಿಲೆದ್ದಿದೆ! ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.
ಪ್ರತಿ ಬಾರಿಯೂ ರೈತರ ಪರವಾಗಿದ್ದೇವೆ ಎಂದು ಬೊಬ್ಬೆ ಹೊಡೆಯುವ ಕಾಂಗ್ರೆಸ್‌ನ ಬಣ್ಣ ಈಗ ಬಯಲಾಗಿದೆ. ರೈತರೇ ಬೀದಿಗಿಳಿದು ಕೈ ಸರ್ಕಾರದ ರೈತ ವಿರೋಧಿ ನೀತಿಯನ್ನು ಬಯಲಿಗೆಳೆಯುತ್ತಿದ್ದಾರೆ.
ಮೆಕ್ಕೆಜೋಳ ಬೆಳೆಗಾರರು ನ್ಯಾಯಯುತ ಬೆಲೆ ನೀಡಿ ಖರೀದಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ ರೈತರ ಈ ಕೂಗಿಗೆ ಕಿವಿ ಮುಚ್ಚಿ ಕುಳಿತಿರುವ ಕಾಂಗ್ರೆಸ್ ಸರ್ಕಾರ ಮೆಕ್ಕೆಜೋಳ ಬೆಳೆಗಾರರ ನ್ಯಾಯಯುತ ಬೇಡಿಕೆಗೆ ಸ್ಪಂದಿಸಬೇಕು. ಇಲ್ಲದಿದ್ದರೆ, ಈ ಪ್ರತಿಭಟನೆಯ ಜ್ವಾಲೆ ಇಡೀ ರಾಜ್ಯಕ್ಕೆ ವ್ಯಾಪಿಸಲಿದೆ ಎಂದು ಅಶೋಕ್ ಎಚ್ಚರಿಸಿದರು.

