ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಉಚ್ಛನ್ಯಾಯಾಲಯದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಪೋಷಕರಾದ ವಿಭು ಬಕ್ರು,
ಕರ್ನಾಟಕ ಉಚ್ಛನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷರು ಆದ ಅನು ಸಿವರಾಮನ್ ಅವರ ನಿರ್ದೇಶನದ ಮೇರೆಗೆ 2025ನೇ ಡಿಸೆಂಬರ್ 13 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಹಮ್ಮಿಕೊಳ್ಳಲಾಗಿದೆ.
ಸದರಿ ಲೋಕ್ ಅದಾಲತ್‍ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸುವ ಸಂಬಂಧ, ಪೋಲಿಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತ ಹಾಗೂ ಸಾರಿಗೆ ಇಲಾಖೆಯಲ್ಲಿ
1991-92 ರಿಂದ 2019-20ರ ಅವಧಿಯಲ್ಲಿ ದಾಖಲಾಗಿ, ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡ ಮೊತ್ತದಲ್ಲಿ ಶೇಕಡಾ 50 ರಷ್ಟು ಸಾರಿಗೆ ಇಲಾಖೆಯು ರಿಯಾಯಿತಿ ನೀಡಿ 2025ನೇ ನವೆಂಬರ್ 21 ರಿಂದ ಡಿಸೆಂಬರ್ 12ರ ವರೆಗೆ ಕಾಲಾವಕಾಶವನ್ನು ನೀಡಲಾಗಿದೆ.
ಸಾರ್ವಜನಿಕರು ಈ ಸದಾವಕಾಶವನ್ನು ಸದುಪಯೋಗಪಡಿಸಿಕೊಂಡು ಇ-ಚಲನ್‍ನಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

