ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕಾನೂನು ಮತ್ತು ಷರತ್ತುಗಳನ್ನು ಉಲ್ಲಂಘಿಸಿ ಅದಿರು ಗಣಿಗಾರಿಕೆ ಮೈನಿಂಗ್ ನಡೆಸುತ್ತಿರುವ ಕಂಪನಿಗಳ ಮೇಲೆ ಮತ್ತು ಇದಕ್ಕೆ ಸಂಬಂಧಿಸಿದಂತೆ ಸರ್ಕಾರಿ ಅಧಿಕಾರಿಗಳ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಜೈಭಾರತ್ ರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಗಣಿಗಾರಿಕೆಯಿಂದ ಸುತ್ತಮುತ್ತಲಿನ ಜಮೀನುಗಳಲ್ಲಿ ಬೆಳೆಗಳ ಮೇಲೆ ಧೂಳು ಕೂತು ರೈತರು ನಷ್ಟ ಅನುಭವಿಸುವಂತಾಗಿದೆ. ಜನಸಾಮಾನ್ಯರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದ್ದು, ವಯೋವೃದ್ದರಿಗೆ ಕಣ್ಣಿನ ದೃಷ್ಟಿ ದೋಷವಾಗಿ ಕಾಲರ, ಅಸ್ತಮಾ, ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತಿದ್ದಾರೆ.
ಹಾಗಾಗಿ ಅಕ್ರಮ ಅದಿರು ಗಣಿಗಾರಿಕೆ ಮೈನಿಂಗ್ ಕಂಪನಿಗಳಿಗೆ ಕಡಿವಾಣ ಹಾಕುವಂತೆ ಜೈಭಾರತ್ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಸ್.ಎನ್.ಮಹಂತೇಶ್ ಜಿಲ್ಲಾಧಿಕಾರಿಯನ್ನು ಆಗ್ರಹಿಸಿದರು.
ಜೈಭಾರತ್ ರಕ್ಷಣಾ ವೇದಿಕೆ ಪದಾಧಿಕಾರಿಗಳು ಈ ಸಂದರ್ಭದಲ್ಲಿದ್ದರು.

