ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ರಾಜ್ಯದಲ್ಲಿ ಒಳಮೀಸಲಾತಿ ಜಾರಿ ಬಳಿಕ ಮಾದಿಗ ಸಮುದಾಯದಲ್ಲಿ ಶಿಕ್ಷಣ, ಉದ್ಯೋಗ, ಸರ್ಕಾರಿ ಸಾಲಸೌಲಭ್ಯ ಮಾಹಿತಿ, ಒಳಮೀಸಲಾತಿಯಡಿ ಮಾದಿಗ ಸಮುದಾಯದ “ಎ” ಗುಂಪಿಗೆ ಅನ್ಯರು ನುಸಳದಂತೆ ತಡೆ ಹಿಡಿಯುವುದರ ಕುರಿತು ಅರಿವು, ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿದೆ.
ಆದ್ದರಿಂದ ರಾಜ್ಯದಲ್ಲಿ ಮಾದಿಗರನ್ನು ಸಂಘಟನೆ ಮಾಡಲು ಮಾದರ ಮಹಾಸಭಾವನ್ನು ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಸಂಘಟನೆ ರೂಪಿಸಲಾಗಿದೆ. ಈಗಾಗಲೇ ಅನೇಕ ಸಭೆ, ಸಮಾರಂಭ, ಕಾರ್ಯಕ್ರಮ ಆಯೋಜಿಸಿದ್ದು, ಮಹಾಸಭಾವನ್ನು ಇನ್ನಷ್ಟು ಬಲಗೊಳಿಸಲು ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ನ.23ರಂದು ಮಧ್ಯಾಹ್ನ 3 ಗಂಟೆಗೆ ದಾವಣಗೆರೆ ನಗರ, 24 ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗ ನಗರ, ಮಧ್ಯಾಹ್ನ 3 ಗಂಟೆಗೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕು ಕೇಂದ್ರದಲ್ಲಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಇತರರು ಪಾಲ್ಗೊಳ್ಳಲಿದ್ದಾರೆ.
ಸಮುದಾಯದ ಸ್ಥಳೀಯ ಮುಖಂಡರು, ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸುವ ಮೂಲಕ ಸಮುದಾಯದ ಒಳಿತಿಗೆ ಬೆಂಬಲವಾಗಿ ನಿಲ್ಲುವಂತೆ ಪ್ರಕಟಣೆಯಲ್ಲಿ ಕೋರಿದೆ.

