ಮುಸ್ಲಿಮರಿಗೆ ತುಷ್ಟೀಕರಣದ ಭಾಗ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಸ್ಲಿಮರಿಗೆ ತುಷ್ಟೀಕರಣದ ಭಾಗ್ಯ, ಓಲೈಕೆ ಗ್ಯಾರೆಂಟಿ! ಹಿಂದೂಗಳಿಗೆ? ತೆರಿಗೆ, ತೊಂದರೆ, ಚೊಂಬು ಗ್ಯಾರೆಂಟಿ! ಭಾಗ್ಯ ನೀಡಿದ ಕಾಂಗ್ರೆಸ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.

ರೈತರಿಗೆ ಬರ-ನೆರೆ ಪರಿಹಾರ ನೀಡಲು ಹಣವಿಲ್ಲ, ನೌಕರರ ಸಂಬಳಕ್ಕೆ ಹಣವಿಲ್ಲ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖರೀದಿಗೆ ಹಣವಿಲ್ಲ, ರಸ್ತೆ ಗುಂಡಿ ಮುಚ್ಚಲು ಹಣವಿಲ್ಲ, ಜನಕಲ್ಯಾಣ ಕಾರ್ಯಕ್ರಮಕ್ಕೆ ಹಣವಿಲ್ಲ, ಮಕ್ಕಳ ಬಿಸಿಯೂಟಕ್ಕೆ ಹಣವಿಲ್ಲ ಎಂದು ಅವರು ಆರೋಪಿಸಿದ್ದಾರೆ.

- Advertisement - 

ಆದರೆ ಮುಸ್ಲಿಂ ಭವನಗಳ ನಿರ್ಮಾಣಕ್ಕೆ 67 ಕೋಟಿ ಇದೆ. ತುಷ್ಟೀಕರಣ, ಓಲೈಕೆಗೂ ಒಂದು ಇತಿಮಿತಿ ಬೇಡವೇ ಸಿಎಂ ಸಿದ್ದರಾಮಯ್ಯನವರೇ? ಹಿಂದೂಗಳು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಲ್ಲವಾ? ಅಥವಾ ರಾಹುಲ್ ಗಾಂಧಿ ಅವಾಗ ಸಂವಿಧಾನ ಪುಸ್ತಕದಲ್ಲಿ ಹಿಂದೂಗಳು ಎರಡನೇ ದರ್ಜೆ ಪ್ರಜೆಗಳಾ? ಎಂದು ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

 

- Advertisement - 

Share This Article
error: Content is protected !!
";