ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಗರದ ಶೇಷಾದ್ರಿಪುರಂನ ಜೆಡಿಎಸ್ ಕಚೇರಿಯಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಿತು. ಜೆಡಿಎಸ್ ಪಕ್ಷಕ್ಕೆ 25 ವರ್ಷ ಹಿನ್ನೆಲೆ ರಜತ ಮಹೋತ್ಸವ ಸಂಭ್ರಮದಲ್ಲಿದೆ.
ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಕರ್ನಾಟಕದಲ್ಲಿ ಕಾಂಗ್ರೆಸ್ನವರು 2028ರವರೆಗೆ ಸಂತಸವಾಗಿರಲಿ. ಈ ಕಾಂಗ್ರೆಸ್ ಸರ್ಕಾರ ಕಿತ್ತೆಸೆಯಲು ಜನರು ಕಾಯುತ್ತಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಹಲವು ಬೆಳವಣಿಗೆ ನಡೆಯುತ್ತಿದೆ. ಮುಂದಿನ 6-7 ತಿಂಗಳಲ್ಲಿ ನಿರೀಕ್ಷಿಸದ ತೀರ್ಮಾನಗಳು ಆಗಬಹುದು ಎಂದು ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳಿದರು.

