ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಮೆಡಿಕಲ್ ಕಾಲೇಜ್ ಪ್ರೊ. ಗಂಗಾಧರ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿರುವ ಘಟನೆ ಚಿಕ್ಕಮಗಳೂರು ಮೆಡಿಕಲ್ ಅನಾಟಮಿ ಕಾಲೇಜಿನಲ್ಲಿ ಜರುಗಿದೆ.
ಮೂರನೇ ಸೆಮಿಸ್ಟರ್ನ ಬೆಂಗಳೂರು ಮೂಲದ ವೈದ್ಯಕೀಯ ವಿದ್ಯಾರ್ಥಿನಿಗೆ ವಾಟ್ಸ್ಆ್ಯಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಆರೋಪಿ ಪ್ರೊ.ಗಂಗಾಧರ್ ಕಳುಹಿಸುತ್ತಿದ್ದಲ್ಲದೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪ ಕೇಳಿ ಬಂದಿದೆ.
ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಹರೀಶ್ ಈ ಸಂಬಂಧ ಪ್ರೊ.ಗಂಗಾಧರ್ಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.
ಕಳೆದ 2023 ರಿಂದ ಗಂಗಾಧರ್ ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಬೆಂಗಳೂರು ಮೂಲದ ವಿದ್ಯಾರ್ಥಿನಿ ಆರೋಪಿಸಿದ್ದರು. ಸದ್ಯ ಈ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ನೋಟಿಸ್ನಲ್ಲೇನಿದೆ?
ಸಂತ್ರಸ್ತೆಯು ಇನ್ಸ್ಟಾಗ್ರಾಂ ಹಾಗೂ ಯೂಟ್ಯೂಬ್ನಲ್ಲಿ ನೀಡಿರುವ ಸಂದರ್ಶನದಲ್ಲಿ, ಡಾ.ಗಂಗಾಧರ ಅವರು ವಾಟ್ಸ್ಆ್ಯಪ್ ಚಾಟ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿರುವ ಬಗ್ಗೆ ಆರೋಪಿಸಿರುತ್ತಾರೆ.
ಈ ಕುರಿತು ಲಿಖಿತ ಸಮಜಾಯಿಷಿ ನೀಡಬಬೇಕು ಎಂದು ಶೋಕಾಸ್ ನೋಟಿಸ್ನಲ್ಲಿ ಸೂಚನೆ ನೀಡಲಾಗಿದೆ.
ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಂ ಹಾಗೂ ಯೂಟ್ಯೂಬ್ನಲ್ಲಿ ಸಂತ್ರಸ್ತೆಯು ನೀಡಿರುವ ಸಂದರ್ಶನದಲ್ಲಿ ನೀವು ವಿದ್ಯಾರ್ಥಿನಿಯೊಡನೆ ವಾಟ್ಸ್ಆ್ಯಪ್ ಚಾಟ್ ನಡೆಸಿ ಅನುಚಿತವಾಗಿ ವರ್ತಿಸಿರುವ ಬಗ್ಗೆ ಹೇಳಿಕೆ ನೀಡಿರುವುದು ಸಾಮಾಜಿಕ ಜಾಲತಾಣದಲ್ಲಿ ದಿನಾಂಕ 23-11-2025 ರಿಂದ ಹರಿದಾಡುತ್ತಿರುತ್ತದೆ.
ಈ ವಾಟ್ಸ್ಆ್ಯಪ್ ಚಾಟ್ ಕುರಿತಂತೆ ತಮ್ಮ ಬಗ್ಗೆ ನೀಡಿರುವ ಹೇಳಿಕೆಗಳ ಕುರಿತು ಈ ನೋಟೀಸ್ ತಲುಪಿದ ಕೂಡಲೇ ಲಿಖಿತ ಸಮಜಾಯಿಷಿ ನೀಡಲು ಸೂಚಿಸಿದೆ. ತಪ್ಪಿದ್ದಲ್ಲಿ ತಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಗಂಗಾಧರ್ ಅವರಿಗೆ ನೀಡಿದ ನೋಟಿಸ್ನಲ್ಲಿ ಡೀನ್ ಉಲ್ಲೇಖಿಸಿದ್ದಾರೆ.

