ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವೇರ್ ಗ್ರೂಪ್ (WeirGroup) ಗಣಿಗಾರಿಕೆ, ಖನಿಜ ಮತ್ತು ಕೈಗಾರಿಕಾ ವಲಯಗಳಿಗೆ ತಾಂತ್ರಿಕ ಪರಿಹಾರವನ್ನು ಒದಗಿಸುವ ಜಾಗತಿಕ ಮಟ್ಟದ ಇಂಜಿನಿಯರಿಂಗ್ ಸಂಸ್ಥೆಯಾಗಿದೆ. ಬ್ರಿಟನ್ ಪ್ರವಾಸದ ವೇಳೆ ಕಂಪೆನಿಯ ಮುಖ್ಯಸ್ಥ ಜಾಕ್ ಓ’ಬ್ರಿಯನ್ ಅವರೊಂದಿಗೆ ಫಲಪ್ರದ ಮಾತುಕತೆ ನಡೆಸಲಾಯಿತು ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
ಕಂಪೆನಿಯ ವಿಸ್ತರಣಾ ಯೋಜನೆಗಳಿಗೆ ಸಂಪೂರ್ಣ ಸಹಕಾರದ ಭರವಸೆ ನೀಡಿ, ಹೊಸ ಕೈಗಾರಿಕಾ ನೀತಿಯಲ್ಲಿ ಲಭ್ಯವಿರುವ ಪ್ರೋತ್ಸಾಹ ಹಾಗೂ ಸೌಲಭ್ಯಗಳನ್ನು ವಿವರಿಸಿದೆ. ಬೆಂಗಳೂರು ಸಮೀಪದ ತಮ್ಮ ಉತ್ಪಾದನಾ ಚಟುವಟಿಕೆಗಳನ್ನು ವಿಸ್ತರಿಸಲು ಸಂಸ್ಥೆ ತೀವ್ರ ಆಸಕ್ತಿ ವ್ಯಕ್ತಪಡಿಸಿತು.
ಗಣಿಗಾರಿಕೆ ಕ್ಷೇತ್ರದಲ್ಲಿ ಡಿಜಿಟಲೀಕರಣ, ಕಾರ್ಯಕ್ಷಮತೆ ಮತ್ತು ಸ್ಥಿರತೆಯನ್ನು ಹೆಚ್ಚಿಸುವ ನವೀನ ತಂತ್ರಜ್ಞಾನಗಳ ಅಳವಡಿಕೆ ಕುರಿತು ಫಲಪ್ರದ ಚರ್ಚೆ ನಡೆಸಲಾಯಿತು ಎಂದು ಸಚಿವ ಪಾಟೀಲ್ ಹೇಳಿದರು.

