ಯುವ ಜನತೆ ತಿಳಿದುಕೊಳ್ಳಬೇಕಾದದ್ದು ಸಾಕಷ್ಟಿದೆ; ಚಲುವರಾಯಸ್ವಾಮಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಂಡ್ಯ.ನ.25.ಯುವ ಸಮೂಹ ಪ್ರಸ್ತುತ ಆಧುನಿಕತೆಯಲ್ಲಿ ತಿಳಿದುಕೊಳ್ಳಬೇಕಾದದ್ದು ಸಾಕಷ್ಟಿದೆ, ಕಲಿಕೆಗೆ ಮಿತಿ ಇಲ್ಲ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು.

 ಮಂಗಳವಾರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ ಮತ್ತು ಮಂಡ್ಯ ಜಿಲ್ಲಾ ಶಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಯೂತ್ ರೆಡ್ ಕ್ರಾಸ್ ಘಟಕದಡಿಯಲ್ಲಿ ಮೈಸೂರು ವಿಭಾಗದ ಕಾಲೇಜು ವಿದ್ಯಾರ್ಥಿಗಳಿಗೆ ಮೂರು ದಿನಗಳ ತರಬೇತಿ ಶಿಬಿರ ಕಾರ್ಯಕ್ರಮ”ವನ್ನು ಉದ್ಘಾಟಿಸಿ ಮಾತನಾಡಿದರು.

- Advertisement - 

ಯುವ ಜನತೆ ತಿಳಿದುಕೊಂಡಷ್ಟು ಆಧುನಿಕರಣದ ಜಗತ್ತಿನಲ್ಲಿ ಉತ್ತಮವಾಗಿ ಬದುಕಬಹುದು. ಯುವಕರು ತಮ್ಮ ಬದುಕಿನಲ್ಲಿ ಶಿಸ್ತು, ಸಂಯಮ, ತಾಳ್ಮೆ, ಸೇವಾ ಮನೋಭಾವನೆ ಮತ್ತು ಮೌಲ್ಯ ಆಧಾರಿತ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿ ಅನುಸರಿಸಬೇಕು ಎಂದರು.

ಸ್ವಾತಂತ್ರ ನಂತರದ ಭಾರತ ಮತ್ತು ಸ್ವಾತಂತ್ರ್ಯದ ಹಿಂದಿನ ಭಾರತದ ಇತಿಹಾಸದ ಕುರಿತಾಗಿ ಯುವ ಜನತೆ ತಿಳಿಯಬೇಕು. ಸ್ವಾತಂತ್ರ್ಯಕ್ಕಾಗಿ ಅನೇಕ ಬಲಿದಾನಗಳೇ ಭಾರತದಲ್ಲಿ ನಡೆದುಹೋಗಿದೆ. ನಮ್ಮ ದೇಶದಲ್ಲಿ ಮಾತ್ರ ಅನೇಕ ಕವಿಗಳು, ಮಹಾನ್ ನಾಯಕರು, ದಾರ್ಶನಿಕರು ಮತ್ತು ಸಂತರು ಸಿಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

- Advertisement - 

ಯುವಕರಿಗೆ ವಿವಿಧ ಕ್ಷೇತ್ರಗಳಲ್ಲಿ ಅನೇಕ ಅವಕಾಶಗಳಿವೆ. ಆದರೆ ಯುವಕರು ದಾರಿಯನ್ನು ಹುಡುಕುವ ಪ್ರಯತ್ನ ಪಡಬೇಕು, ಅಧಿಕಾರಿಗಳನ್ನು ನೋಡಿ  ಸ್ಪರ್ಧಾತ್ಮಕ ಜಗತ್ತಿನಲ್ಲಿ ತಮ್ಮನ್ನು ತಾವು ಗುರುತಿಸಿಕೊಳ್ಳಬೇಕು. ಇಂತಹ ಶಿಬಿರಗಳಲ್ಲಿ ಪಾಲ್ಗೊಂಡು ಅನೇಕ ಕಾರ್ಯಗಾರಗಳಲ್ಲಿ  ಕಲಿತು ಸಮಾಜಕ್ಕೆ ಉತ್ತಮ ಪ್ರಜೆ ಆಗಬೇಕು ಎಂದು ತಿಳಿ ಹೇಳಿದರು.

ಅನೇಕರು ಕೆಲವು ವರ್ಷಗಳ ಕಾಲ ಸಮಾಜ ಸೇವೆಯನ್ನು ನಂತರ ಕಾಣೆಯಾಗುತ್ತಾರೆ ಆದರೆ ನಾನು ರಾಜಕೀಯ ಪ್ರವೇಶ ಮಾಡಿದಾಗಿದಲೂ ಮೀರಾ ಶಿವಲಿಂಗಯ್ಯ ಅವರು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಬಂದಿದ್ದಾರೆ. ಆರೋಗ್ಯ ಸಚಿವನಾಗಿದ್ದಾಗ ಸ್ವತಹ ನಾನು ಸಹ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿದ್ದೇನೆ ಎಂದು ತಿಳಿಸಿದರು.

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಮಂಜುಶ್ರೀ ಎನ್ ಅವರು ಮಾತನಾಡಿ ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರ್ಯಕ್ರಮ ಆದರೂ ಅತ್ಯಂತ ಸಂತೋಷದಿಂದ ಭಾಗವಹಿಸುತ್ತೇನೆ. ಮಂಡ್ಯದ ಗಂಡು ನಟಿ ಅಂಬರೀಶ್ ರವರಾದರೆ ನಾನು ಮಂಡ್ಯದ ಹೆಣ್ಣು ಏಕೆಂದರೆ ಮಂಡ್ಯ ಜಿಲ್ಲೆಯ ಪ್ರಥಮ ಮಹಿಳಾ ಜಿಲ್ಲಾಧಿಕಾರಿಯಾಗಿ ನಾನು ಅಧಿಕಾರ ಸ್ವೀಕರಿಸಿದ್ದು ನನ್ನ ಹೆಮ್ಮೆ ಎಂದು ಹರ್ಷ ವ್ಯಕ್ತಪಡಿಸಿದರು.

ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉನ್ನತ ಸ್ಥಾನ ಅಲಂಕರಿಸಬೇಕು ಅದಕ್ಕಾಗಿ ನಾವು “ವಿಜಯಿಭವ” ಎಂಬ ಯೂಟ್ಯೂಬ್ ಚಾನೆಲ್ ತೆರೆದಿದ್ದೇವೆ ಇದರಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಶಿಕ್ಷಣ ನೀಡಲಾಗುವುದು. ಐಎಎಸ್ ಐಪಿಎಸ್ ನಂತಹ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ಯಶೋಗಾಥೆಯನ್ನು ಸ್ಪರ್ಧಾರ್ಥಿಗಳಿಗೆ ಪೂರ್ತಿ ತುಂಬಲು ಪ್ರಸಾರ ಮಾಡಲಾಗುತ್ತದೆ ಎಂದರು.

ಯೂತ್ ರೆಡ್ ಕ್ರಾಸ್ ಶಿಬಿರಗಳಲ್ಲಿ ಜೀವ ಉಳಿಸಬಹುದಾದ  ಚಿಕಿತ್ಸೆಗಳ ಬಗ್ಗೆ ತಿಳಿದುಕೊಳ್ಳಬಹುದು, ಇದರಿಂದ ಎಷ್ಟೋ ಸಂದರ್ಭದಲ್ಲಿ ಪ್ರಾಣ ಹಾನಿಯನ್ನು ತಪ್ಪಿಸಬಹುದು. ಯೂಥ್ ರೆಡ್ ಕ್ರಾಸ್ ಕಾರ್ಯಕ್ರಮಕ್ಕೆ ಬಂದಿರುವ ಶಿಬಿರಾರ್ಥಿಗಳು ಸಕ್ರಿಯವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಳ್ಳಿ ಎಂದು ಹೇಳಿದರು.

ನಂತರ ಯೂತ್ ರೆಡ್ ಕ್ರಾಸ್ ಕೈಪಿಡಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರಾದ ಮಂಜುಶ್ರೀ.ಎನ್ ಅವರು ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ.  ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಶಾಖೆಯ ಬಸ್ರೂರು ರಾಜೀವ್ ಶೆಟ್ಟಿ, ಮೈ ಶುಗರ್ ಅಧ್ಯಕ್ಷ ಸಿ.ಡಿ ಗಂಗಾಧರಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ. ಚೆಲುವಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 

 

Share This Article
error: Content is protected !!
";