ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂವಿಧಾನ ದಿನ ಆಚರಣೆಯ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ಹಾಗೂ ಸಂವಿಧಾನ ರಚನಾ ಸಮಿತಿಯಲ್ಲಿ ದುಡಿದ ಎಲ್ಲಾ ಮಹನೀಯರಿಗೂ ಹೃದಯಪೂರ್ವಕ ನಮನಗಳನ್ನು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಸಮರ್ಪಿಸಿದ್ದಾರೆ.
ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತಕ್ಕೆ ಸರ್ವಶ್ರೇಷ್ಟ ಸಂವಿಧಾನ ನೀಡಿದ ಎಲ್ಲರನ್ನೂ ಸ್ಮರಿಸುತ್ತಲೇ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು 1949 ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಲಾದ ದಿನವನ್ನು 2015 ನವೆಂಬರ್ 26ರಂದು ‘ಸಂವಿಧಾನ ದಿನ‘ವೆಂದು ಘೋಷಿಸಿದರು.
ಈ ಮೂಲಕ ಸಂವಿಧಾನ ರಚಿಸಿದ ಎಲ್ಲಾ ಮಹನೀಯರನ್ನು ಸದಾ ಸ್ಮರಿಸುವ ಮಹತ್ಕಾರ್ಯಕ್ಕೆ ನಾಂದಿ ಹಾಡಿದರು.
ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಮತ್ತು ನಮ್ಮ ಮಹಾನ್ ರಾಷ್ಟ್ರ ಭಾರತವನ್ನು ಬಲಪಡಿಸುವುದು ಮುಂದುವರಿಸಲು ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ. ಸರ್ವರಿಗೂ ಸಂವಿಧಾನ ದಿನದ ಶುಭಾಶಯಗಳನ್ನು ಕುಮಾರಸ್ವಾಮಿ ಅವರು ಕೋರಿದ್ದಾರೆ.

