ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಸೈಯದ್ ಅಫಾಖ್ ಅಹಮದ್  

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಮೂವತ್ತು ವರ್ಷಗಳ ಕಾಲ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಪತ್ರಾಂಕಿತ ವ್ಯವಸ್ಥಾಪಕರಾಗಿ ನಿವೃತ್ತಿಯಾಗಿರುವ ಸೈಯದ್ ಅಫಾಖ್ ಅಹಮದ್ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಗುರುವಾರ ಕಾಂಗ್ರೆಸ್ ಕಚೇರಿಯಲ್ಲಿ ಸೈಯದ್ ಅಫಾಖ್ ಅಹಮದ್‌ಗೆ ಪಕ್ಷದ ಶಾಲು ಹಾಕಿ ಬರಮಾಡಿಕೊಂಡರು.

- Advertisement - 

೨೦೨೪ ರಲ್ಲಿ ನಡೆದ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸೈಯದ್ ಅಫಾಖ್ ಅಹಮದ್ ಅಲ್ಪಸಂಖ್ಯಾತ ಆಯೋಗದ ಜಿಲ್ಲಾ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿರುತ್ತಾರೆ.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‌ಕುಮಾರ್, ಡಿ.ಎನ್.ಮೈಲಾರಪ್ಪ, ಡಾ.ರಹಮತ್‌ವುಲ್ಲಾ, ಸೈಯದ್ ಸೈಫುಲ್ಲಾ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

- Advertisement - 

 

 

Share This Article
error: Content is protected !!
";