ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ
ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ, ಸನ್ಮಾನ ಮಾಡಿ, ತಲಾ ಐದು ಲಕ್ಷ ರೂಪಾಯಿ ಪ್ರೋತ್ಸಾಹಧನ ಘೋಷಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮಸಲಹೆಗಾರ ಕೆ.ವಿ.ಪ್ರಭಾಕರ್, ವಿಪ ಸದಸ್ಯ ಕೆ.ಗೋವಿಂದರಾಜ್, ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಮನೋಜ್ ಕುಮಾರ್, ಸಂಚಾಲಕ ರವೀಂದ್ರ, ಕಾರ್ಯದರ್ಶಿ ರಾಜೇಶ್ ಮತ್ತು ತರಬೇತುದಾರ ಬಿ.ಎನ್.ಸುಧಾಕರ್ ಅವರುಗಳು ಉಪಸ್ಥಿತರಿದ್ದರು.

