ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಇನ್ಸಿಟಿಟ್ಯೂಟ್ ಮ್ಯಾನೇಜ್ ಮೆಂಟ್ ತರಬೇತಿ ಸಂಸ್ಥೆಯು 2026 ನೇ ಜನವರಿ 1 ರಿಂದ ಪ್ರಾರಂಭವಾಗುವ ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ರೆಗ್ಯುಲರ್ ಮತ್ತು ದೂರ ಶಿಕ್ಷಣದ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
 

ತರಬೇತಿ ಪಡೆಯಲು ಆಸಕ್ತಿ ಹೊಂದಿರುವ  ಅಭ್ಯರ್ಥಿಗಳು  ಡಿಸೆಂಬರ್ 15 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಪಿಯುಸಿ ಉತ್ತೀರ್ಣರಾಗಿರಬೇಕು. ಪಿಯುಸಿ ಮೇಲ್ಪಟ್ಟ  ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದು. ತರಬೇತಿ ಪಡೆಯುವ ಎಲ್ಲಾ ಅಭ್ಯರ್ಥಿಗಳಿಗೂ ಮಾಹೆಯಾನ ಶಿಷ್ಯವೇತನ ನೀಡಲಾಗುವುದು. ಸದರಿ ತರಬೇತಿಯು ಸಹಕಾರ ಕ್ಷೇತ್ರದ ನೇಮಕಾತಿ ಪರೀಕ್ಷೆಗಳಿಗೆ ಅನುಕೂಲಕರವಾಗಲಿದೆ.

- Advertisement - 

ಅರ್ಜಿಯನ್ನು ಕರ್ನಾಟಕ ಇನ್ಸಿಟಿಟ್ಯೂಟ್ ಆಫ್ ಕೋರ್ಸ್ ಮ್ಯಾನೇಜ್ ಮೆಂಟ್, ನಂಬರ್ 1/2, ಎರಡನೇ ಮಹಡಿ ಮೂರನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು -18 ಈ ವಿಳಾಸದಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9449007661 ಹಾಗೂ 08035541407 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

- Advertisement - 

Share This Article
error: Content is protected !!
";