ಬೇಡರೆಡ್ಡಿಹಳ್ಳಿ: ಮಾದರಿ ಗ್ರಾಮ  ಪಂಚಾಯಿತಿಯ ಗುರಿ- ಸಿಇಒ ಡಾ.ಎಸ್.ಆಕಾಶ್

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬೇಡರೆಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಹಳ್ಳಿ
, ಬಂಜಿಗೆರೆ ಗ್ರಾಮಗಳು ಸೇರಿದಂತೆ ಬೇಡರೆಡ್ಡಿ ಗ್ರಾಮ ಪಂಚಾಯಿತಿಯನ್ನು ಜಿಲ್ಲೆಯಲ್ಲಿಯೇ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡುವ ಗುರಿಹೊಂದಿದ್ದು, ಇದಕ್ಕೆ ಎಲ್ಲರ  ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಹೇಳಿದರು.

      ಚಳ್ಳಕೆರೆ ತಾಲ್ಲೂಕಿನ ಬೇಡರೆಡ್ಡಿ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಬೇಡರೆಡ್ಡಿಹಳ್ಳಿ ಕಾಯಕ ಗ್ರಾಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

- Advertisement - 

ಗ್ರಾಮ ಪಂಚಾಯಿತಿಗಳ ಸಮಗ್ರ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳು 2025-2026ನೇ ಸಾಲಿನ ಬಜೆಟ್ ಭಾಷಣದಲ್ಲಿ ಕಾಯಕ ಗ್ರಾಮ ಎಂಬ ಪರಿಕಲ್ಪನೆ ಘೋಷಿಸಿದ್ದು, ಅದರಂತೆ ಪ್ರಗತಿಯಲ್ಲಿ ಹಿಂದುಳಿದಿರುವ ಗ್ರಾಮ ಪಂಚಾಯಿತಿಗಳನ್ನು ಹಿರಿಯ ಅಧಿಕಾರಿಗಳು ಆಯ್ಕೆ ಮಾಡಿಕೊಂಡು ಸಮಗ್ರವಾಗಿ ಅಭಿವೃದ್ಧಿಪಡಿಸುವ ಸಲುವಾಗಿ ಯೋಜನೆಯನ್ನು ರೂಪಿಸಿ ಅಭಿವೃದ್ಧಿ ಸಾಧಿಸಲಾಗುತ್ತಿದೆ. ಅದರಂತೆ ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿಯನ್ನು ದತ್ತು ಪಡೆದು ಖುದ್ದಾಗಿ ಮೇಲ್ವಿಚಾರಣೆ ನಡೆಸಿ, ಸಮಗ್ರ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದರು.

ಚಿಕ್ಕಹಳ್ಳಿ ಮತ್ತು ಬಂಜಿಗೆರೆ ಗ್ರಾಮಗಳಿಗೆ ಭೇಟಿ ನೀಡಿ ಪ್ರಾಥಮಿಕ ಆರೋಗ್ಯ ಕೇಂದ್ರ, ಒವರ್ ಹೆಡ್ ಟ್ಯಾಂಕ್, ಶುದ್ಧ ಕುಡಿಯುವ ನೀರಿನ ಘಟಕಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹಾಗೂ ಜೆ.ಜೆ.ಎಂ ಯೋಜನೆಯಡಿ ಅಳವಡಿಸಿರುವ ಗೃಹ ನಳ ಸಂಪರ್ಕದ ಗುಣಮಟ್ಟ, ಮೀಟರ್ ಅಳವಡಿಕೆ, ಕುಡಿಯುವ ನೀರಿನ ಪೂರೈಕೆ, ಸ್ವಚ್ಚ ಭಾರತ್ ಮಿಷನ್ (ಗ್ರಾಮೀಣ), ವೈಯುಕ್ತಿಕ ಗೃಹ ಶೌಚಾಲಯ ಗಳ ಬಳಕೆ, ಘನ ತ್ಯಾಜ್ಯ ನಿರ್ವಹಣೆ ಹಾಗೂ ಕಾರ್ಯಾಚರಣೆ ಕುರಿತು ಪರಿಶೀಲನೆ ನಡೆಸಿದರು.

- Advertisement - 

ಈ ಸಂದರ್ಭದಲ್ಲಿ ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಶಶಿಧರ್, ಜಿಲ್ಲಾ ಐಇಸಿ ಸಮಾಲೋಚಕ ಬಿ.ಸಿ.ನಾಗರಾಜು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಳ್ಳಕೆರೆ ಉಪವಿಭಾಗದ ಸಹಾಯಕ ಇಂಜಿನಿಯರ್ ಭಾರತಿ ನಾಯಕ,

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಶಿರಾಜ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಅರುಣ್, ಉಪಾಧ್ಯಕ್ಷೆ ಯಲ್ಲಮ್ಮ, ಸದಸ್ಯರಾದ ನಾಗೇಶ್ ಕುಮಾರ್, ತಿಮ್ಮಯ್ಯ, ರಾಮರೆಡ್ಡಿ, ಗ್ರಾಮದ ಮುಖಂಡರಾದ ಎಸ್.ಬಿ.ವಿಶ್ವನಾಥ ರೆಡ್ಡಿ, ಎಸ್.ಬಸವರೆಡ್ಡಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸಿ.ಗಿರೀಶ್ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

 

Share This Article
error: Content is protected !!
";