ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ
04 ತಾಲ್ಲೂಕುಗಳ 09 ಗ್ರಾಮ ಪಂಚಾಯಿತಿಗಳಲ್ಲಿ  ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಹಾಗೂ

ಹೊಳಲ್ಕೆರೆ ಹಾಗೂ ಹೊಸದುರ್ಗ ಪುರಸಭೆಯಲ್ಲಿ ಖಾಲಿ ಇರುವ ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ 18 ರಿಂದ 45 ವರ್ಷ ವಯೋಮಾನದೊಳಗಿರುವ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 17 ಕೊನೆಯ ದಿನ.

- Advertisement - 

    ಗ್ರಾಮೀಣ, ನಗರ ಪನರ್ವಸತಿ ಕಾರ್ಯಕರ್ತರ ಹುದ್ದೆಗೆ ಮಾಸಿಕ ರೂ.10000/-ಗಳ ಗೌರವಧನ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಲು ಆಸಕ್ತರಿರುವ, ಆಯಾ ಗ್ರಾಮ ಪಂಚಾಯಿತಿ, ಆಯಾ ನಗರ ವ್ಯಾಪ್ತಿಯ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾದ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯಾ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಲ್ಲಿ ಸಲ್ಲಿಸುವುದು.

      ಖಾಲಿ ಹುದ್ದೆಗಳ ವಿವರ ಇಂತಿದೆ. ಚಿತ್ರದುರ್ಗ ತಾಲ್ಲೂಕಿನ ಸಿದ್ದಾಪುರ ಹಾಗೂ ಸಿರಿಗೆರೆ ಗ್ರಾಮ ಪಂಚಾಯಿತಿ, ಹೊಳಲ್ಕೆರೆ ತಾಲ್ಲೂಕಿನ ನಾಗಗೊಂಡನಹಳ್ಳಿ (ಎನ್.ಜಿ.ಹಳ್ಳಿ), ತುಪ್ಪದಹಳ್ಳಿ ಗ್ರಾಮ ಪಂಚಾಯಿತಿ, ಹಿರಿಯೂರು ತಾಲ್ಲೂಕಿನ ಗನ್ನನಾಯಕನಹಳ್ಳಿ, ಕಸ್ತೂರಿ ರಂಗಪ್ಪನಹಳ್ಳಿ ರಂಗನಾಥ ಪುರ ಗ್ರಾಮ ಪಂಚಾಯಿತಿಹೊಸದುರ್ಗ ತಾಲ್ಲೂಕಿನ ಚಿಕ್ಕ ಬ್ಯಾಲದಕೆರೆ (ಸಿ.ಬಿ.ಕೆರೆ), ಹುಣವಿನಡು ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಖಾಲಿ ಇವೆ. ಹೊಳಲ್ಕೆರೆ ಪುರಸಭೆ ಹಾಗೂ ಹೊಸದುರ್ಗ ಪುರಸಭೆಯಲ್ಲಿ ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಖಾಲಿ ಇವೆ.

- Advertisement - 

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ದೂರವಾಣಿ ಸಂಖ್ಯೆ 08194-235284 ಅವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

 

 

 

Share This Article
error: Content is protected !!
";