ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಮೆಕ್ಕೆಜೋಳ ಹಾಗೂ ಹೆಸರುಕಾಳು ಬೆಳೆಗಾರರು ಮಾರುಕಟ್ಟೆ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರವು ತಕ್ಷಣ ಮಧ್ಯಪ್ರವೇಶ ಮಾಡಿ ಕನಿಷ್ಠ ಬೆಂಬಲ ಬೆಲೆ, ಎಥೆನಾಲ್ ಹಂಚಿಕೆಯಲ್ಲಿನ ಸಮಸ್ಯೆಗಳನ್ನು ಸರಿಪಡಿಸಿ, ರೈತರಿಗೆ ದೊರೆಕಬೇಕಾದ ನ್ಯಾಯಯುತ ಬೆಲೆ ಸಿಗುವಂತೆ ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರಧಾನಿಗಳು ಶುಕ್ರವಾರ ಉಡುಪಿಗೆ ಭೇಟಿನೀಡಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮೋದಿಯವರನ್ನು ರಾಜ್ಯಕ್ಕೆ ಬರಮಾಡಿಕೊಂಡು, ನಮ್ಮ ಮನವಿ ಪತ್ರವನ್ನು ಅವರಿಗೆ ನೀಡಿದ್ದಾರೆ.
ಪ್ರಧಾನಿ ಮೋದಿ ಅವರು ತಕ್ಷಣ ರಾಜ್ಯದ ರೈತರ ಕಷ್ಟವನ್ನು ಅರ್ಥೈಸಿಕೊಂಡು, ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂದು ಭಾವಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

