ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಗುಂಡು ಹಾರಿಸಿಕೊಂಡು ನಿವೃತ್ತ ಡಿವೈಎಸ್ಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯಲ್ಲಿ ಜರುಗಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಹನುಮಂತಪ್ಪ ಹೆಚ್.ವೈ ತುರಾಯ್ (70) ಎಂದು ಗುರುತಿಸಲಾಗಿದೆ. ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಮನೆಯಲ್ಲಿ ಒಬ್ಬರೇ ಇದ್ದಾಗ ಗನ್‍ನಿಂದ ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಡಿವೈಎಸ್ಪಿಯಾಗಿದ್ದ ಅವರು 2014ರಲ್ಲಿ ನಿವೃತರಾಗಿದ್ದರು.
ಬಳಿಕ ಅವರು ದಾವಣಗೆರೆಗೆ ಬಂದು ನೆಲೆಸಿದ್ದರು. ದಾವಣಗೆರೆ ಜಿಲ್ಲೆಯ ಚಿಕ್ಕನಹಳ್ಳಿ ಬಡಾವಣೆಯ ಖಾದಿ ಗ್ರಾಮೋದ್ಯೋಗ (ಕೆಟಿಜೆ ನಗರ) ಕಚೇರಿ ಬಳಿ ಇರುವ ಮನೆಯಲ್ಲಿ ಈ ಆಘಾತಕಾರಿ ಘಟನೆ ಜರುಗಿದೆ.

