ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಸಮನ್ವಯ ಸಭೆ, ಜಂಟಿ ಹೋರಾಟಕ್ಕೆ ತೀರ್ಮಾನ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಸಮನ್ವಯ ಸಭೆಯಲ್ಲಿ ಪಾಲ್ಗೊಂಡು ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ವಿಧಾನಮಂಡಲದಲ್ಲಿ ದನಿ ಎತ್ತಿ, ಸರ್ಕಾರದ ವೈಫಲ್ಯಗಳ ಬಗ್ಗೆ ಪ್ರಶ್ನೆ ಮಾಡುವ ಕುರಿತಂತೆ ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಜೆಡಿಎಸ್ ಸಿಎಲ್ ಪಿ ನಾಯಕ ಸುರೇಶ್ ಬಾಬು ಇವರ ನೇತೃತ್ವದಲ್ಲಿ ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿ ಕುಮಾರ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸಿ. ಬಿ. ಸುರೇಶ್‌ಬಾಬು, ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್, ಶಾಸಕರಾದ ಎಸ್.ಆರ್ ವಿಶ್ವನಾಥ್, ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಪ್ರಮುಖರು ಉಪಸ್ಥಿತರಿದ್ದರು.

