ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ-ಜೆಡಿಎಸ್ ಹೋರಾಟ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಮಂಡಲದ ಮುಂಗಾರು ಅಧಿವೇಶನ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಜೆಡಿಎಸ್
ಹಾಗೂ ಬಿಜೆಪಿ ಪಕ್ಷಗಳ (NDA) ಮೈತ್ರಿಕೂಟದ ಸಮನ್ವಯ ಸಭೆ ಅತ್ಯಂತ ಯಶಸ್ವಿಯಾಗಿ ಜರುಗಿತು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ನಡೆಸುವ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು.

- Advertisement - 

ಸಭೆಯಲ್ಲಿ ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿ ಕುಮಾರ್,‌

ಮಾಜಿ ವಿಧಾನ ಪರಿಷತ್ ನಾಯಕ ತಿಪ್ಪೇಸ್ವಾಮಿ, ಜೆಡಿಎಸ್ ಶಾಸಕರುಗಳಾದ ಎಂ.ಟಿ ಕೃಷ್ಣಪ್ಪ, ಜಿ.ಡಿ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಟಿ ಎನ್ ಜವರಾಯಿಗೌಡ, ರವಿಕುಮಾರ್ ಅವರು ಸೇರಿ ಮೈತ್ರಿ ಪಕ್ಷಗಳ ಪ್ರಮುಖರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

- Advertisement - 

 

 

Share This Article
error: Content is protected !!
";