ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಗೆ ಭೇಟಿ ನೀಡಲು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಶಿವಮೊಗ್ಗ ಜಿಲ್ಲೆಯ ನಾಯಕರಿಂದ ಆತ್ಮೀಯ ಗೌರವ ದೊರೆಯಿತು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
ಶಿವಮೊಗ್ಗ ಸಂಸದರಾದ ಬಿ.ವೈ ರಾಘವೇಂದ್ರ, ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯಾನಾಯಕ, ಶಾರದಾ ಅಪ್ಪಾಜಿಗೌಡ ಅವರು ಆತ್ಮೀಯವಾಗಿ ಸ್ವಾಗತ ಕೋರಿದರು. ಎಲ್ಲರಿಗೂ ನಾನು ಅಭಾರಿ ಎಂದು ಕುಮಾರಸ್ವಾಮಿ ತಿಳಿಸಿದರು.


