ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂಘಟನೆ ಮತ್ತಷ್ಟು ಬಲಿಷ್ಟಗೊಳಿಸುವ ಜೊತೆಗೆ ಎದುರಾಗುವ ಪ್ರತಿಯೊಂದು ಸವಾಲುಗಳು ಕೂಡ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನಿಗೆ ಅತ್ಯಂತ ಮಹತ್ವದ್ದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣಾ ಕಾರ್ಯತಂತ್ರ ಕುರಿತಂತೆ ಚರ್ಚಿಸಲು ಇಂದು ಪಕ್ಷದ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ‘ದಲ್ಲಿ ಸಿದ್ಧತಾ ಸಭೆ ನಡೆಸಿ ಅವರು ಮಾತನಾಡಿದರು.
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ, ಮಾಜಿ ಡಿಸಿಎಂ ಮತ್ತು ಶಾಸಕರಾದ ಡಾ.ಅಶ್ವಥ್ ನಾರಾಯಣ, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕರುಗಳಾದ ಸುರೇಶ್,
ಉದಯ ಗರುಡ, ಮುನಿರತ್ನ, ಮುನಿರಾಜ್, ವಿಧಾನ ಪರಿಷತ್ ಸದಸ್ಯರಾದ ಕೇಶವ ಪ್ರಸಾದ್, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಪ್ರಮುಖರಾದ ವೈ.ಎ.ನಾರಾಯಣ ಸ್ವಾಮಿ, ಸಪ್ತಗಿರಿಗೌಡ, ಹರೀಶ್, ತಮ್ಮೇಶ್ ಗೌಡ, ಮತ್ತಿತರರು ಉಪಸ್ಥಿತರಿದ್ದರು.

