ಹೈಕಮಾಂಡ್ ಏಜೆಂಟ್ ವೇಣುಗೋಪಾಲ್ ಸೂಚನೆ ನೀಡುವ ಮುನ್ನ ಎಚ್ಚೆತ್ತುಕೊಳ್ಳಿ ಸಿದ್ದರಾಮಯ್ಯನವರೇ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಎಂ ಸಿದ್ದರಾಮಯ್ಯನವರೇ
, ಕಾಂಗ್ರೆಸ್ ಪಕ್ಷಕ್ಕೆ ಸೇರಿ 20 ವರ್ಷಗಳಾದ ಮೇಲೆ ಮೊಟ್ಟಮೊದಲ ಬಾರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಮನೆಗೆ ಭೇಟಿ ನೀಡಿ, ನಾಟಿಕೋಳಿ ತಿಂಡಿ ತಿಂದು  “ಹೋಮ್ ಟೂರ್” ಮಾಡಿಕೊಂಡು ಬಂದಿದ್ದೀರಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

ಮುಂದಿನ ಬ್ರೇಕ್ ಫಾಸ್ಟ್ ಮೀಟಿಂಗ್ ಎಲ್ಲಿ, ಯಾರ ಜೊತೆ ಅಂತ ನಿಮ್ಮ ಹೈಕಮಾಂಡ್ ಏಜೆಂಟ್ ಕೆ.ಸಿ ವೇಣುಗೋಪಾಲ್ ಅವರು ಆದೇಶ ಕೊಡುವುದಕ್ಕೂ ಮುಂಚೆ ಒಮ್ಮೆ “ಸರ್ಕಾರಿ ಸ್ಕೂಲ್ ಟೂರ್” ಮಾಡಿಕೊಂಡು ಬನ್ನಿ ಎಂದು ಅಶೋಕ್ ತಾಕೀತು ಮಾಡಿದ್ದಾರೆ.

- Advertisement - 

ಶೌಚಾಲಯಗಳೇ ಇಲ್ಲದ ಶಾಲೆಗಳು, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳು, ಬಿದ್ದು ಹೋಗುತ್ತಿರುವ ಗೋಡೆಗಳು, ಶಿಕ್ಷಕರಿಲ್ಲದ ತರಗತಿಗಳನ್ನು ಒಮ್ಮೆ ಕಣ್ತುಂಬಿಕೊಂಡು ಬನ್ನಿ ಸಿದ್ದರಾಮಯ್ಯನವರೇ. ಇಂತಹ ಲಜ್ಜೆಗೆಟ್ಟ ಸರ್ಕಾರವನ್ನ ಇಡೀ ಪ್ರಪಂಚದ ಇತಿಹಾಸದಲ್ಲೇ ಕಾಣಲು ಸಾಧ್ಯವಿಲ್ಲ ಎಂದು ಅಶೋಕ್ ಟೀಕಿಸಿದ್ದಾರೆ.

 

- Advertisement - 

Share This Article
error: Content is protected !!
";