ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್‌ಭ್ರಷ್ಟಾಚಾರದ “ಕೈ”. ಕರ್ನಾಟಕ ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಮಾಡುವ ಭ್ರಷ್ಟಾಚಾರ, ಹಗರಣಗಳಿಗೆ ಲೆಕ್ಕವೇ ಇಲ್ಲ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.
ಹೆಸ್ಕಾಂನಲ್ಲಿ 1,500 ಟ್ರಾನ್ಸ್‌ಫಾರ್ಮರ್‌ಗಳ ವಿತರಣೆ ವೇಳೆ 90 ಕೋಟಿಗೂ ಹೆಚ್ಚು ಗುಳುಂ ಸ್ವಾಹ ಮಾಡಿದ್ದಾರೆ ಸಚಿವ ಜಾರ್ಜ್.
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ, ನಗರ ಭಾಗದ ಲೆಕ್ಕ ಕೇಳಿದರೆ ಗ್ರಾಮೀಣ ಭಾಗದ ಕಡೆಗೆ, ಕೃಷಿಕರಿಗೆ ವಿತರಿಸಿದ ಟ್ರಾನ್ಸ್‌ಫಾರ್ಮರ್‌ಗಳ ವಿವರಣೆ ಕೇಳಿದರೆ ನಗರದ ಲೆಕ್ಕ ಕೊಟ್ಟು ವಂಚಿಸಿರುವುದು ಸಿಐಡಿ ತನಿಖೆಯಲ್ಲಿ ಬಯಲಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.

