ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮನೆ ಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ನೀಡಲು ಹೈಕೋರ್ಟ್ ಬುಧವಾರ ತಿರಸ್ಕರಿಸುವ ಮೂಲಕ ಮತ್ತೊಂದು ಶಾಕ್ ನೀಡಿದೆ.

ಪ್ರಜ್ವಲ್ ರೇವಣ್ಣ ಅವರ ಪರ ವಕೀಲರು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ವಿಧಿಸಲಾಗಿರುವ ಜೀವಾವಧಿ ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.

- Advertisement - 

ಅಪರಾಧದ ಗಂಭೀರತೆ ಮತ್ತು ಬಾಕಿ ಇರುವ ಇತರ ಪ್ರಕರಣಗಳ ಮೇಲಿನ ಸಂಭಾವ್ಯ ಪರಿಣಾಮದಿಂದಾಗಿ ಈ ಹಂತದಲ್ಲಿ ಜಾಮೀನು ನೀಡುವುದು ಸೂಕ್ತವಲ್ಲ ಎಂದು ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಮತ್ತು ನ್ಯಾಯಮೂರ್ತಿ ವೆಂಕಟೇಶ್ ನಾಯಕ್ ಟಿ ಅವರಿದ್ದ ವಿಭಾಗೀಯ ಪೀಠ ಅಭಿಪ್ರಾಯಪಟ್ಟು ಅವರ ಜಾಮೀನು ಅರ್ಜಿ ವಜಾಗೊಳಿಸಿದೆ.

 

- Advertisement - 

 

Share This Article
error: Content is protected !!
";