ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ಮಹಿಳಾ ನೌಕರರ ಸಮ್ಮೇಳನವನ್ನು ಉದ್ಘಾಟಿಸಿ, ಬಳಿಕ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ವತಿಯಿಂದ, “ಮಹಿಳಾ ನೌಕರರಿಗಾಗಿ ಋತುಚಕ್ರ ರಜೆ” ಘೋಷಿಸಿರುವ ಸರ್ಕಾರದ ಕ್ರಮಕ್ಕಾಗಿ ಸನ್ಮಾನ ಸ್ವೀಕರಿಸಿದರು.
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಹೆಚ್.ಕೆ ಪಾಟೀಲ್, ದಿನೇಶ್ ಗುಂಡೂರಾವ್, ಲಕ್ಷ್ನೀ ಹೆಬ್ಬಾಳ್ಕರ್, ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ಅಶೋಕ್ ಬಿ ಹಿಂಚಿಗೇರಿ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ,
ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಬಲ್ಕಿಷ್ ಬಾನು, ಆರತಿ ಕೃಷ್ಣ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ, ಮಹಿಳಾ ನೌಕರರ ಸಂಘದ ಅಧ್ಯಕ್ಷರಾದ ರೋಶನಿಗೌಡ ಸೇರಿ ಹಲವು ಪ್ರಮುಖರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

