ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸುವರ್ಣ ಮಹೋತ್ಸವ ಅಂಗವಾಗಿ ನೆರವೇರಿದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ
ಚಿಕ್ಕಮಗಳೂರಿನ ಕನ್ನಡಪರ ಹೋರಾಟಗಾರ, ಪತ್ರಕರ್ತ ಬಿ.ಎಂ.ಕುಮಾರ್ ಅವರನ್ನು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಮಾಡಿದ ಸಮಾಜ ಸೇವೆಯನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಚಿವ ರಾಣಿ ಸತೀಶ್, ಮಾರ್ಗರೇಟ್ ಆಳ್ವಾ, ನಟಿ ಜಯಮಾಲ, ಮೂಡಿಗೆರೆ ಕ್ಷೇತ್ರದ ಮಾಜಿ ಶಾಸಕರಾದ ಮೋಟಮ್ಮ ಮತ್ತಿತರರು ಇದ್ದರು.

