ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ವಿ.ಪಾಳ್ಯ ಗ್ರಾಮದಲ್ಲಿ ಮಂಜುನಾಥ್ ತನ್ನ ಹದಿನಾಲ್ಕು ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿರುವುದನ್ನು ಖಂಡಿಸಿ ಕರ್ನಾಟಕ ಮಹಿಳಾ ಮತ್ತು ಮಕ್ಕಳ ರಕ್ಷಣಾ ವೇದಿಕೆಯಿಂದ ಅಪರ ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಮಂಜುನಾಥ್ ಮಗಳನ್ನು ಜಮೀನಿಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿರುವುದು ನಾಗರೀಕ ಸಮಾಜ ತಲೆತಗ್ಗಿಸುವಂತಾಗಿದೆ. ಇದಕ್ಕೆ ತಾಯಿಯೆ ಗಂಡನಿಗೆ ಪ್ರೋತ್ಸಾಹ ನೀಡಿರುವುದು ನಾಚಿಕೆಗೇಡಿನ ಸಂಗತಿ. ಸೂಕ್ತ ತನಿಖೆ ನಡೆಸಿ ಅತ್ಯಾಚಾರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಪ್ರತಿಭಟನಾನಿರತರು ವಿನಂತಿಸಿದರು.
ಕರ್ನಾಟಕ ಮಹಿಳಾ ಮತ್ತು ಮಕ್ಕಳ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷೆ ಹೆಚ್.ಭಾರತಿ, ಜಿಲ್ಲಾಧ್ಯಕ್ಷೆ ತುಳಸಿ ರಮೇಶ್, ಭಾಗ್ಯಮ್ಮ, ಶ್ರೀದೇವಿ, ನಿರ್ಮಲ, ರತ್ನಮ್ಮ
ಚೌಡಮ್ಮ, ಲಕ್ಷ್ಮಮ್ಮ, ಬಸಮ್ಮ, ಶಂಕರಮ್ಮ, ಪ್ರಿಯಾಂಕ, ವೇದಿಕೆ ರಾಜ್ಯ ಗೌರವಾಧ್ಯಕ್ಷ ಹನುಮಂತಪ್ಪ ದುರ್ಗ, ದೇವರಾಜ್ ನಗರಂಗೆರೆ, ಅನಂತಮೂರ್ತಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

