ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ದಿಢೀರ್ ಭೇಟಿ ಮಾಡಿ ಸುಮಾರು ಒಂದು ತಾಸು ಮಾತುಕತೆ ನಡೆಸಿರುವ ಘಟನೆ ಶುಕ್ರವಾರ ಜರುಗಿದ್ದು ರಾಜಕೀಯ ವಲಯದಲ್ಲಿ ಸಾಕಷ್ಟು ಗುಸುಗುಸು ಸುದ್ದಿ ಹರಡಿದೆ.
ಡಿಕೆ ಶಿವಕುಮಾರ್ ಜೊತೆಗೆ ಒಂದು ಗಂಟೆಗೂ ಹೆಚ್ಚಿನ ಸಮಯ ಚರ್ಚೆ ಮಾಡಿದ್ದರೂ ಚರ್ಚೆಯ ಗುಟ್ಟನ್ನು ಪ್ರಿಯಾಂಕ್ ಖರ್ಗೆ ಬಿಟ್ಟುಕೊಟ್ಟಿಲ್ಲ. ರಾಜಕೀಯ ವಲಯದಲ್ಲಿ ಇದು ಕುತೂಹಲಕ್ಕೆ ಕಾರಣವಾಗಿದೆ.
ಪ್ರಿಯಾಂಕ್ ಖರ್ಗೆ ಭೇಟಿಗೂ ಮುನ್ನ ಸತೀಶ್ ಜಾರಕಿಹೊಳಿ ಹಾಗೂ ಡಿಕೆ ಶಿವಕುಮಾರ್ ಮಾತುಕತೆ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ. ಆದರೆ, ಮದುವೆಗೆ ಬಂದಿದ್ದ ಸಂದರ್ಭದಲ್ಲಿ ಡಿಸಿಎಂ ಅವರನ್ನು ಭೇಟಿಯಾದೆ ಅಷ್ಟೇ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

